ಧಾರವಾಡ : ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ (ತಾತ್ಕಾಲಿಕ ಹಾಗೂ ಅರೆಕಾಲಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಸಂಬಂಧಪಟ್ಟ ಎಲ್ಲ ಪೂರಕ ದಾಖಲೆಗಳನ್ನು (ಮೂಲ ಪ್ರತಿ ಹಾಗೂ ಅವುಗಳ ಎರಡು ಸೆಟ್ ಛಾಯಾ ಪ್ರತಿಗಳನ್ನು) ತಮ್ಮ ಭಾವಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ, ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೈಬ್ಸೈಟ್ www.uasd.edu ಗೆ ಭೇಟಿ ನೀಡಬಹುದು ಎಂದು ಕೃವಿವಿ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

