ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರ್ ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮುಕ್ತಿಹಳ್ಳಿ ಸಮೀಪ ನಡೆದಿದೆ.
19 ವರ್ಷದ ಮೋಹಿನ್ ಮೃತಪಟ್ಟವರು. ಖಾಸಗಿ ಕಾಲೇಜು ವಿದ್ಯಾರ್ಥಿ ಮೋಹಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರ್ ನಲ್ಲಿದ್ದ ಆರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ನೇಹಿತರ ಜೊತೆಗೆ ಕಾರ್ ನಲ್ಲಿ ಕೊಟ್ಟಿಗೆಹಾರಕ್ಕೆ ಮೋಹಿನ್ ತೆರಳಿದ್ದ. ಅತಿ ವೇಗದ ಚಾಲನೆಯಿಂದ ತಿರುವಿನಲ್ಲಿ ನಿಯಂತ್ರಿಸಲು ಸಾಧ್ಯವಾಗದೆ ಕಾರ್ ಗದ್ದೆಗೆ ಬಿದ್ದಿದೆ. ಮೋಹಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ 6 ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

