HomeLatest NewsBREAKING: ಲಾರಿ ಡಿಕ್ಕಿಯಾಗಿ ಬಸ್ ಗೆ ಬೆಂಕಿ: 17 ಪ್ರಯಾಣಿಕರು ಸಜೀವ ದಹನ

BREAKING: ಲಾರಿ ಡಿಕ್ಕಿಯಾಗಿ ಬಸ್ ಗೆ ಬೆಂಕಿ: 17 ಪ್ರಯಾಣಿಕರು ಸಜೀವ ದಹನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ ತಗುಲಿದ್ದು, 17ಕ್ಕೂ ಹೆಚ್ಚು ಜನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನು ಹಿರಿಯೂರು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

 ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದೆ. ಡಿವೈಡರ್ ದಾಟಿ ಬಂದ ಲಾರಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಿಂದಾಗಿ ಅಪಘಾತ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಕ್ರಿಸ್ಮಸ್ ರಜೆಗೆ ಊರಿಗೆ ತೆರೆಳುತ್ತಿದ್ದವರು ಮಸಣ ಸೇರಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ಪಿ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಳಿ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಅಪಘಾತ ಎಸಗಿದ ಲಾರಿ ಮತ್ತು ಬಸ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular