HomeKarnatakaಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಸಚಿವರಿಂದ ಗುಡ್ ನ್ಯೂಸ್: ಜನವರಿ ಅಥವಾ ಫೆಬ್ರವರಿಯಲ್ಲಿ ಅಡುಗೆ ಎಣ್ಣೆ,...

ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಸಚಿವರಿಂದ ಗುಡ್ ನ್ಯೂಸ್: ಜನವರಿ ಅಥವಾ ಫೆಬ್ರವರಿಯಲ್ಲಿ ಅಡುಗೆ ಎಣ್ಣೆ, ಬೇಳೆ ಒಳಗೊಂಡ ಇಂದಿರಾ ಕಿಟ್ ವಿತರಣೆ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಕೆಜಿ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ನಲ್ಲಿ ತೊಗರಿ ಬೇಳೆ, ಸಕ್ಕರೆ, ಉಪ್ಪು ವಿತರಿಸಲಾಗುವುದು. ಅಕ್ಕಿ ವಿತರಣೆ ಪ್ರಮಾಣ ಹೆಚ್ಚಾಗಿದ್ದು, ಅಷ್ಟು ಪ್ರಮಾಣದಲ್ಲಿ ಅಕ್ಕಿ ಬಳಕೆ ಮಾಡುವುದಿಲ್ಲ ಎನ್ನುವ ಕಾರಣಕ್ಕೆ ಇಂದಿರಾ ಕಿಟ್ ಯೋಜನೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಅನರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದಲ್ಲಿ ಕೂಡಲೇ ತಹಶೀಲ್ದಾರ್ ಭೇಟಿ ಮಾಡಿ ಅರ್ಜಿ ಸಲ್ಲಿಸಿದರೆ 15 ದಿನಗಳ ಒಳಗೆ ಪಡಿತರ ಚೀಟಿ ನೀಡಲಾಗುವುದು. ಅನರ್ಹರು ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular