HomeLatest NewsBREAKING : ಚಿತ್ರದುರ್ಗ ಭೀಕರ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ...

BREAKING : ಚಿತ್ರದುರ್ಗ ಭೀಕರ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 11 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ.

ಘಟನೆಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ ಅಪಘಾತದ ನಂತರದ ಎಕ್ಸ್ ಪೋಸ್ಟ್ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಬಸ್ ಬೆಂಕಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಸಹ ಅವರು ಘೋಷಿಸಿದ್ದಾರೆ.

ಡಿವೈಡರ್ ದಾಟಿ ಬಂದ ಲಾರಿ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಡಿಕ್ಕಿ ಹೊಡೆದಿದ್ದು, 11 ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಭೀಕರ ದುರಂತಕ್ಕೆ ರಾಜ್ಯವೇ ಮಮ್ಮುಲ ಮರುಗಿದೆ. ಅಪಘಾತದ ಭಯಾನಕ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಭೀಕರ ದುರಂತ ಸಂಭವಿಸಿದೆ. ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಗೆ ಬೆಂಕಿ ತಗುಲಿ ಬಸ್ ನಲ್ಲಿದ್ದ 17 ಜನ ಸಾವನ್ನಪ್ಪಿದ್ದಾರೆ. ಸೀ ಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ ತಗುಲಿ ದುರಂತ ಸಂಭವಿಸಿದೆ.ಸೀಬರ್ಡ್ ಟೂರಿಸ್ಟ್ ಬಸ್, ಬೆಂಗಳೂರಿನಿಂದ ಗೋಕರ್ಣಕ್ಕೆ 32 ಜನರನ್ನು ಸಾಗಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ.

ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ, ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ನ ಡೀಸೆಲ್ ಟ್ಯಾಂಕ್ ಬಳಿ ಡಿಕ್ಕಿ ಹೊಡೆದ ಪರಿಣಾಮ ಇಂಧನ ಚಿಮ್ಮಿ ಕ್ಷಣವೇ ಬೆಂಕಿ ಹೊತ್ತಿಕೊಂಡಿತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular