HomeLatest NewsBREAKING : 'ಚಿತ್ರದುರ್ಗ ಬಸ್ ದುರಂತ' ಕೇಸ್ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ...

BREAKING : ‘ಚಿತ್ರದುರ್ಗ ಬಸ್ ದುರಂತ’ ಕೇಸ್ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ.!

ಚಿತ್ರದುರ್ಗ :   ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ   ”ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು : CM ಸಿದ್ದರಾಮಯ್ಯ

ಚಿತ್ರದುರ್ಗದಲ್ಲಿ ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ.ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದಿದ್ದಾರೆ.

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 5 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಅಪಘಾತದ ಹಲವು ಭಯಾನಕ ವೀಡಿಯೋಗಳು ವೈರಲ್ ಆಗುತ್ತಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular