HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಫೆಬ್ರವರಿಯೊಳಗೆ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕ್ರಯಪತ್ರದಂತೆ ನೋಂದಣಿ ಮಾಡಿ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಫೆಬ್ರವರಿಯೊಳಗೆ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ

ಬೆಂಗಳೂರು: ಬಹುಕಾಲದಿಂದ ತಾಂಡಾ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ.

ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.

ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೆ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾರಂಟಿ ನೀಡುವ ಈ ಕಾರ್ಯ ರಾಜ್ಯಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಹುತೇಕ ಬಡ ಕುಟುಂಬಗಳೇ ಇದರ ಫಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸವನ್ನು ಮಾಡಿಕೊಡುತ್ತಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿಯನ್ನುಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular