HomeLatest Newsಬೈಕ್ ಗೆ ಟಿಪ್ಪರ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೈಕ್ ಗೆ ಟಿಪ್ಪರ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಹೊರವಲಯದ ಜಿಲ್ಲಾಡಳಿತ ಭವನದ ಸಮೀಪ ಅಜ್ಜವಾರ ಬಳಿ ಗುರುವಾರ ರಾತ್ರಿ 9:30 ಸುಮಾರಿಗೆ ಅಪಘಾತ ಸಂಭವಿಸಿದೆ. ಅಜ್ಜವಾರ ಗ್ರಾಮದ ನಂದೀಶ್, ನರಸಿಂಹ, ಅರುಣ್, ಮನೋಜ್ ಮೃತಪಟ್ಟವರು.

ನಾಲ್ವರೂ ಸ್ನೇಹಿತರಾಗಿದ್ದು, ಚಿಕ್ಕಬಳ್ಳಾಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಡ್ಲಘಟ್ಟ ಕಡೆಯಿಂದ ಚಿಕ್ಕಬಳ್ಳಾಪುರ ಕಡೆಗೆ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular