HomeLatest Newsವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಪೋಸ್ಟ್: ಕಿಡಿಗೇಡಿಗಳ ಬಂಧನಕ್ಕೆ 3 ವಿಶೇಷ ತಂಡ ರಚನೆ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಪೋಸ್ಟ್: ಕಿಡಿಗೇಡಿಗಳ ಬಂಧನಕ್ಕೆ 3 ವಿಶೇಷ ತಂಡ ರಚನೆ

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಭಯ ಬಿದ್ದಿರುವ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿರುವ ತಮ್ಮ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಕೆಲವರು ಕ್ಷಮೆ ಕೇಳಿದ್ದಾರೆ. ವಿಜಯಲಕ್ಷ್ಮಿ ವಿರುದ್ಧ ಹಾಕಿದ್ದ ಅಶ್ಲೀಲ ಅವಹೇಳನಕಾರಿ ಸಂದೇಶಗಳನ್ನು ಡಿಲೀಟ್ ಮಾಡಿದ್ದಾರೆ.

ವಿಜಯಲಕ್ಷ್ಮಿ ಮತ್ತು ಅವರ ಕುಟುಂಬ ಸದಸ್ಯರನ್ನು ನಿಂದಿಸಿ ಜಾಲತಾಣಗಳಲ್ಲಿ 150ಕ್ಕೂ ಹೆಚ್ಚು ಪೋಸ್ಟ್ ಗಳನ್ನು ಹಾಕಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular