HomeLatest Newsಡ್ರೆಸ್ಸಿಂಗ್ ರೂಂನಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ಸೆರೆ: ಆಸ್ಪತ್ರೆ ಸಿಬ್ಬಂದಿ ಅರೆಸ್ಟ್

ಡ್ರೆಸ್ಸಿಂಗ್ ರೂಂನಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ಸೆರೆ: ಆಸ್ಪತ್ರೆ ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ನಾಗರಬಾವಿ ಹಾಸಗಿ ಆಸ್ಪತ್ರೆಯ ನಿರ್ದೇಶಕ ಡಾ. ಚೇತನ್ ನೀಡಿದ ದೂರಿನ ಆಧಾರದ ಮೇಲೆ ಆಸ್ಪತ್ರೆಯ ಜೂನಿಯರ್ ಟೆಕ್ನಿಷಿಯನ್ ಸುವೆಂದು ಮಹಾಂತ(23) ಎಂಬುವನನ್ನು ಬಂಧಿಸಲಾಗಿದೆ. ಡಿಸೆಂಬರ್ 20ರಂದು ಬೆಳಗ್ಗೆ 8.30 ರ ಸುಮಾರಿಗೆ ಆಸ್ಪತ್ರೆಯ ಶಸ್ತ್ರಚಿಕಿತ್ಸ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ಆರೋಪಿ ಮೊಬೈಲ್ ಫೋನ್ ಬಳಸಿಕೊಂಡು ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ. ಇದನ್ನು ಗಮನಿಸಿದ ಮತ್ತೊಬ್ಬ ಮಹಿಳಾ ಸಿಬ್ಬಂದಿ ಆಸ್ಪತ್ರೆಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದರು.

ಆರೋಪಿ ಮೊಬೈಲ್ ಪರಿಶೀಲಿಸಿದಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದು ಗೊತ್ತಾಗಿದೆ. ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular