HomeLatest NewsBREAKING: ಲೇಡಿ ನರ್ಸ್ ಗಳು, ಸಹೋದ್ಯೋಗಿಗಳು ಬಟ್ಟೆ ಬದಲಿಸುವುದನ್ನು ವಿಡಿಯೋ ಚಿತ್ರೀಕರಿಸಿ ವಿಕೃತಿ: ಆರೋಪಿ ಅರೆಸ್ಟ್

BREAKING: ಲೇಡಿ ನರ್ಸ್ ಗಳು, ಸಹೋದ್ಯೋಗಿಗಳು ಬಟ್ಟೆ ಬದಲಿಸುವುದನ್ನು ವಿಡಿಯೋ ಚಿತ್ರೀಕರಿಸಿ ವಿಕೃತಿ: ಆರೋಪಿ ಅರೆಸ್ಟ್

ಬೆಂಗಳೂರು: ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ, ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿ ಲೇಡಿ ನರ್ಸ್ ಗಳು ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ಬೆಂಗಳೂರಿನ ನಾಗರಭಾವಿ ಖಾಸಗಿ ಆಸ್ಪತ್ರೆಯ ನೌಕರ ಸುವೆಂದು ಮೊಹಂತಿ ಈ ಕೃತ್ಯವೆಸಗುತ್ತಿದ್ದ. ಇದನ್ನು ಗಮನಿಸಿದ ನರ್ಸ್, ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು.

ವೈದ್ಯ ಚೇತನ್ ತಕ್ಷಣ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಕೆಲಸ ಮಾಡುತ್ತಿದ್ದ. ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸುವೆಂದು ಮೊಹಂತಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular