HomeLive NewsBREAKING: ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪಿಡಿಒ ಅಮಾನತು

BREAKING: ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪಿಡಿಒ ಅಮಾನತು

ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಲಿ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ್ ಗಿರಿಯಪ್ಪನವರ್ ಅವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಪಿಡಿಒ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಅಮಾನತು ಮಾಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿತ್ತು.

ಮಾನ್ಯಾ ಪಾಟೀಲ್ ಚಿಕಿತ್ಸೆ ಮತ್ತು ಅಂತ್ಯಕ್ರಿಯ ವೇಳೆ ತಕ್ಷಣಕ್ಕೆ ಸ್ಪಂದಿಸಿರಲಿಲ್ಲ. ಸ್ಥಳೀಯ ಸಮಿತಿಯವರು ಸಭೆ ಕರೆದಾಗ ಬಂದಿರಲಿಲ್ಲ. ಪಿಡಿಒ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ಹೊರ ಹಾಕಿದ್ದವು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಡಿಒ ನಾಗರಾಜ್ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರ ಸಭೆ ನಡೆಸಿ ಕೈಗೊಂಡ ಕ್ರಮಗಳ ಕುರಿತ ಠರಾವು ಪಾಸು ಮಾಡಿಲ್ಲ. ಮಾನ್ಯಾ ಅವರ ಶವ ಸಂಸ್ಕಾರ ಸಂದರ್ಭದಲ್ಲೇ ನಡೆದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಪೊಲೀಸರು ಸಹಾಯ ಕೇಳಿದಾಗ ಸ್ಪಂದಿಸದೆ ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular