HomeLatest NewsSBI ಗ್ರಾಹಕರಿಗೆ ಗುಡ್ ನ್ಯೂಸ್: ಮರೆತುಹೋದ ಖಾತೆಯಲ್ಲಿನ ಹಣ ಪಡೆಯಲು ಡಿ.29 ರಂದು ನಿಮ್ಮ ಹಣ...

SBI ಗ್ರಾಹಕರಿಗೆ ಗುಡ್ ನ್ಯೂಸ್: ಮರೆತುಹೋದ ಖಾತೆಯಲ್ಲಿನ ಹಣ ಪಡೆಯಲು ಡಿ.29 ರಂದು ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನ

ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿ, ವಿಮಾ ಕಂತುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಖಾತೆಯಲ್ಲಿನ ಹಣವನ್ನು ಹಸ್ತಾಂತರಿಸುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಖಾತೆದಾರರು, ಕಾನೂನು ಬದ್ಧ ವಾರಸುದಾರರು ಬ್ಯಾಂಕ್‌ ಗಳಲ್ಲಿ 10 ವರ್ಷಗಳಿಗಿಂತಲೂ ಹೆಚ್ಚು ಕಾಲ ನಿಷ್ಕ್ರಿಯಯವಾಗಿರುವ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ಸೂಕ್ತ ಅಗತ್ಯ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಭಾಗವಹಿಸಿ ಹಕ್ಕು ಪಡೆಯದ ಹಣವನ್ನು ಮರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಿಮ್ಮ ತಂದೆ, ತಾಯಿ, ಅಜ್ಜಿ, ತಾತಂದಿರು ಬ್ಯಾಂಕ್ ಖಾತೆಗಳಲ್ಲಿ ಹಣವಿಟ್ಟು ಮರೆತಿದ್ದರೆ ಅಂತಹ ಹಣವನ್ನು ಪಡೆಯಬಹುದು. ಈ ಖಾತೆಗಳಿಗೆ ನಾಮನಿರ್ದೇಶನ ಮಾಡಿದ್ದರೆ ಅಂತವರಿಗೆ ಹಣ ದೊರೆಯುತ್ತದೆ. ಇಲ್ಲದಿದ್ದರೆ ವಂಶವೃಕ್ಷ ಮತ್ತು ಪ್ರಮಾಣ ಪತ್ರಗಳನ್ನು ಪಡೆದು ಸಂಬಂಧಿಸಿದ ವಾರಸುದಾರರಿಗೆ ಈ ನಿಷ್ಕ್ರಿಯ ಖಾತೆಗಳಲ್ಲಿರುವ ಹಣ ನೀಡಲಾಗುತ್ತದೆ.

ನಿಷ್ಕ್ರಿಯ ಖಾತೆಯಲ್ಲಿನ ಹಣದ ಮಾಹಿತಿಯನ್ನು https://udgram.rbi.org.in ನಲ್ಲಿ ಆನ್‌ಲೈನ್ ಮೂಲಕವೂ ಪಡೆಯಬಹುದು. ನಿಷ್ಕ್ರಿಯ ಖಾತೆಗಳಿಗೆ ಸಂಬಂಧಪಟ್ಟವರು ಅಂದು ಅಭಿಯಾನದಲ್ಲಿ ಪಾಲ್ಗೊಳ್ಳಬಹುದು. ಈ ಅಭಿಯಾನವು ಬ್ಯಾಂಕ್‌ಗಳಲ್ಲಿ ನಿರಂತರವಾಗಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ಮಾರುತಿ ಕರ್ಪಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular