HomeLatest Newsನಾಳೆ ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಮೀನುಗಾರಿಕೆಗೆ ನಿರ್ಬಂಧ

ನಾಳೆ ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಮೀನುಗಾರಿಕೆಗೆ ನಿರ್ಬಂಧ

ನವದೆಹಲಿ/ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆ ಮೂಲಕ ಸಮುದ್ರ ಯಾನ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.

ಈ ಮೂಲಕ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಸಾಗಲಿರುವ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಡಾ. ಅಬ್ದುಲ್ ಕಲಾಂ ಅವರು ಜಲಾಂತರ್ಗಾಮಿ ನೌಕೆಯಲ್ಲಿ ಯಾನ ಕೈಗೊಂಡ ಮೊದಲ ರಾಷ್ಟ್ರಪತಿ. ಅವರು 2006ರಲ್ಲಿ ಬಂಗಾಳಕೊಲ್ಲಿಯಲ್ಲಿ ಐಎನ್ಎಸ್ ಸಿಂಧು ರಕ್ಷಕ್ ಸಬ್ ಮರೀನ್ ನಲ್ಲಿ 3.5 ಗಂಟೆ ಯಾನ ಮಾಡಿದ್ದರು. ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರವಾರ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆಯ ಮೂಲಕ ಸಮುದ್ರಯಾನ ಕೈಗೊಳ್ಳಲಿದ್ದಾರೆ.

ಮೀನುಗಾರಿಕೆಗೆ ನಿರ್ಬಂಧ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ. 28ರಂದು ಕಾರವಾರ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3:30ರವರೆಗೆ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.

ಭಾನುವಾರ ಮಧ್ಯಾಹ್ನ 3.30ರವರೆಗೆ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆ ನಿರ್ಬಂಧಿಸಿದ್ದು, ಎಲ್ಲಾ ಮೀನುಗಾರರು ಮತ್ತು ದೋಣಿ ಮಾಲೀಕರು ಸೂಚನೆಯನ್ನು ಪಾಲಿಸುವಂತೆ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular