HomeLatest Newsಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 20 ವರ್ಷ ಜೈಲು ಶಿಕ್ಷೆ: 1.5 ಲಕ್ಷ ರೂ. ದಂಡ

ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 20 ವರ್ಷ ಜೈಲು ಶಿಕ್ಷೆ: 1.5 ಲಕ್ಷ ರೂ. ದಂಡ

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು 1.5 ಲಕ್ಷ ರೂ. ದಂಡ ಸಹಿತ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಗಂಗಾವತಿಯ ಹೆಚ್.ಆರ್.ಎಸ್ ಕಾಲೋನಿಯ ನಿವಾಸಿ ಹುಲ್ಲೇಶ ಕೊಜ್ಜ ಎಂಬ ಆರೋಪಿಯು ಪ್ರಕರಣದ ಅಪ್ರಾಪ್ತ ವಯಸ್ಸಿನ ಬಾಲಕಿ ಶಾಲೆಗೆ ಹೋಗಿ ಬರುವಾಗ ಬಾಧಿತಳನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದನು. 2022 ರ ಸೆಪ್ಟೆಂಬರ್ 7 ರಂದು ಬೆಳಗ್ಗೆ 9 ಗಂಟೆಗೆ ಬಾಲಕಿಳು ಶಾಲೆಗೆ ಹೋಗುವ ಸಮಯದಲ್ಲಿ ಹೊಸಳ್ಳಿ ಕ್ರಾಸ್ ಹತ್ತಿರ ತನ್ನ ಮಾವನ ಮೋಟಾರ್ ಸೈಕಲ್ ತೆಗೆದುಕೊಂಡು ಬಂದು ಶಾಲೆಗೆ ಬಿಡುವುದಾಗಿ ಹೇಳಿ ಮೋಟಾರ್ ಸೈಕಲ್ ಮೇಲೆ ಹತ್ತುವಂತೆ ಹೇಳಿದಾಗ ಬಾಲಕಿ ನಿರಾಕರಿಸಿದ್ದಳು. ಅವಳನ್ನು ಹೆದರಿಸಿ ಮೋಟಾರ್ ಸೈಕಲ್ ಮೇಲೆ ಕೂರಿಸಿಕೊಂಡು ಶಾಲೆಗೆ ಬಿಡದೇ ಬಲವಂತವಾಗಿ ಮಲ್ಲಾಪುರ ಸೀಮಾದ ವಾನಭದ್ರೇಶ್ವರ ಗುಡ್ಡಕ್ಕೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಅತ್ಯಾಚಾರ ಎಸಗಿದ್ದನು. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದಲ್ಲಿ ನಿನ್ನ ಮತ್ತು ನಿನ್ನ ಅಪ್ಪನನ್ನು ಸಾಯಿಸುವುದಾಗಿ ಜೀವ ಹೆದರಿಕೆ ಹಾಕಿದ್ದ.

ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪೊಲೀಸ್ ನೀರಿಕ್ಷಕ ಮಂಜುನಾಥ ಎಸ್. ಅವರು ದೂರು ಸ್ವೀಕರಿಸಿ ಪ್ರಕರಣದ ತನಿಖೆಯನ್ನು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 13/2024 ರಲ್ಲಿ ದಾಖಲಾಗಿ ವಿಚಾರಣೆಗೊಂಡಿದ್ದು, ವಿಚಾರಣೆಯನ್ನು ನಡೆಸಿದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಆರೋಪಿಯ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ಹಾಗೂ ರೂ. 1,50,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಡಿಸೆಂಬರ್ 19 ರಂದು ತೀರ್ಪು ಪ್ರಕಟಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.  ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ವಿಶ್ವನಾಥ ಹಾಗೂ ಮಂಜುನಾಥ ನ್ಯಾಯಾಲಯದಲ್ಲಿ ಸಾಕ್ಷಿದಾರರನ್ನು ಸಕಾಲಕ್ಕೆ ಹಾಜರುಪಡಿಸಿ ಸಹಕರಿಸಿರುತ್ತಾರೆ ಎಂದು ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular