HomeLatest NewsBIG NEWS: ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದಲೂ ಉತ್ತರ ಪ್ರದೇಶದಂತೆ ಬುಲ್ಡೋಜರ್ ರಾಜ್ ಕ್ರಮ: ಕೇರಳ ಸಿಎಂ...

BIG NEWS: ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದಲೂ ಉತ್ತರ ಪ್ರದೇಶದಂತೆ ಬುಲ್ಡೋಜರ್ ರಾಜ್ ಕ್ರಮ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿ

ತಿರುವನಂತಪುರಂ: ಬೆಂಗಳೂರಿನ ಫಕೀರ ಕಾಲೋನಿ, ವಸೀಂ ಲೇಔಟ್ ನ ಅಕ್ರಮ ಕಟ್ತಡಗಳ ನೆಲಸಮ ಮಾಡುತ್ತಿರುವ ಸರ್ಕಾರದ ಕ್ಲ್ರಮ ಖಂಡಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೂಡ ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ರಾಜ್ ನೀತಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳ ನೆಲಸಮ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ ‘ಬುಲ್ಡೋಜರ್ ನೀತಿ’ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಫಕೀರ್ ಕಾಲೋನಿ, ವಸೀಮ್ ಲೇಔಟ್‌ನಲ್ಲಿ ನೋಟಿಸ್ ನೀಡದೆ ಮನೆ ತೆರವುಗೊಳಿಸಿದ್ದರಿಂದ ನೂರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಇದು ಸಂವಿಧಾನ ವಿರೋಧಿ ಕ್ರಮ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ದುಃಖಕರ ವಿಚಾರ. ”ಬುಲ್ಡೋಜರ್ ರಾಜ್” ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಕೋಗಿಲು ಬಳಿ ಇರುವ 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ತೆಂಗಿನ ಚಿಪ್ಪು ಸಂಸ್ಕರಣೆ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ನಿರ್ಮಾಣ ಮಾಡಬೇಕು ಎಂಬ ಯೋಜನೆಯನ್ನು ಹಾಕಿತ್ತು. ಈ ಪ್ರದೇಶದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular