HomeLatest Newsಸರ್ಕಾರಿ ಶಾಲೆಗಳಲ್ಲಿ 2 ತಿಂಗಳಿಗೊಮ್ಮೆ ಪೋಷಕರು- ಶಿಕ್ಷಕರ ಸಭೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

ಸರ್ಕಾರಿ ಶಾಲೆಗಳಲ್ಲಿ 2 ತಿಂಗಳಿಗೊಮ್ಮೆ ಪೋಷಕರು- ಶಿಕ್ಷಕರ ಸಭೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು ಶಿಕ್ಷಕರ ಮಹಾಸಭೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜನವರಿ 3 ಮತ್ತು ಫೆಬ್ರವರಿ 28ರಂದು ಪೇರೆಂಟ್ ಟೀಚರ್ ಮೀಟಿಂಗ್ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಳೆದ ನವೆಂಬರ್ 14ರಂದು ರಾಜ್ಯಾದ್ಯಂತ ಪಾಲಕರು ಮತ್ತು ಶಿಕ್ಷಕರ ಸಭೆ ನಡೆಸಲಾಗಿತ್ತು. ಇದೇ ರೀತಿ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಲು ಸೂಚಿಸಲಾಗಿತ್ತು. ಅಂತೆಯೇ ಸಭೆಯ ದಿನಾಂಕ ನಿಗದಿ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.

ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಾಲೆಗಳಲ್ಲಿ ಮಹಾಸಭೆ ನಡೆಸಿದ ಮಾಹಿತಿ, ಹಾಜರಾದ ವಿದ್ಯಾರ್ಥಿಗಳು, ಆಹ್ವಾನಿಸಿದ ಪೋಷಕರು ಹಾಗೂ ಹಾಜರಾದ ಪೋಷಕರ ಸಂಖ್ಯೆಯ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನವೆಂಬರ್ 14ರ ಸಭೆಗೆ ನೀಡಲಾದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular