ಬೆಂಗಳೂರು: ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದ ಕೆಟ್ಟ ಕಮೆಂಟ್, ಬಾಡಿ ಶೇಮಿಂಗ್ ಬಗ್ಗೆ ಸಾನ್ವಿ ಇನ್ ಸ್ಟಾಗ್ರಾಂ ನಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ‘ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ’ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.
ಇನ್ನು ಮಗಳ ಬಗ್ಗೆ ಕಿಡಿಗೇಡಿಗಳಿಂದ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ್ದ ವಿಚಾರವಾಗಿ ನಿನ್ನೆಯಷ್ಟೇ ಪ್ರತಿಕ್ರಿಯಿಸಿದ್ದ ನಟ ಕಿಚ್ಚ ಸುದೀಪ್, ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ನ ಮಕ್ಕಳು. ನಾನು ಫೇಸ್ ಮಾಡಿದ್ದಕ್ಕಿಂತ ಅದರ ಹತ್ತರಷ್ಟು ನನ್ನ ಮಗಳು ಫೇಸ್ ಮಾಡ್ತಾಳೆ. ಮಗಳು ಸಾನ್ವಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಟ್ರೋಲಿಗರಿಗೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

