HomeLatest Newsಎನ್‌.ಪಿ.ಎಸ್‌. ರದ್ದುಪಡಿಸಿ ಒಪಿಎಸ್‌ ಜಾರಿ ಬಗ್ಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಖ್ಯ...

ಎನ್‌.ಪಿ.ಎಸ್‌. ರದ್ದುಪಡಿಸಿ ಒಪಿಎಸ್‌ ಜಾರಿ ಬಗ್ಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಖ್ಯ ಮಾಹಿತಿ

ಶಿವಮೊಗ್ಗ: ಸರ್ಕಾರಿ ನೌಕರರಾದ ನಾವುಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರ ಕೆಲಸವನ್ನು  ತ್ವರಿತಗತಿಯಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.

ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ವಾಹನ ಚಾಲಕರ ಸಂಘ ಹಾಗೂ ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಇಡೀ ದಿನ ಆಗುವ ಕೆಲಸವನ್ನು ಒಂದೇ ಗಂಟೆಯಲ್ಲಿ ಮಾಡಿ ಮುಗಿಸುವಂತಹ ಅವಶ್ಯಕತೆ ಇದೆ. ಇದಕ್ಕಾಗಿ ಪ್ರತಿಯೊಬ್ಬ ನೌಕರನೂ ಆಧುನಿಕ ತಂತ್ರಜ್ಞಾನದ ಜ್ಞಾನವನ್ನು ಪಡೆದುಕೊಳ್ಳಬೇಕು,. ಆಗ ಮಾತ್ರ ಕೆಲಸದಲ್ಲಿ ವೇಗವನ್ನು ಪಡೆಯಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ‍್ಟಿಫಿಶಿಯಲ್ ಇಂಟಲಿಜೆನ್ಸಿ ಈಗ ಎಲ್ಲಾ ಕಡೆ ಬಳಸಿಕೊಳ್ಳಲಾಗುತ್ತಿದೆ. ಇದು ಇಲಾಖಾ ವ್ಯಾಪ್ತಿಗೆ ಬಂದರೆ ಸರ್ಕಾರಕ್ಕೆ ನೌಕರರ ಅವಶ್ಯಕತೆಯೇ ಬರುವುದಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ನೌಕರರ ಸಮೂಹ ಕಚೇರಿಗೆ ಅಲೆಸದೇ ಕೆಲಸವನ್ನು ಮಾಡಿಕೊಡಬೇಕು ಎಂದರು.

ಸರ್ಕಾರಿ ನೌಕರರಿಗೆ ನಮ್ಮ ಸಂಘಟನೆ ಸರ್ಕಾರದೊಂದಿಗೆ ಮಾತುಕತೆ ಮೂಲಕವೇ 7ನೇ ವೇತನ, ಆರೋಗ್ಯ ಸಂಜೀವಿನಿ ಸೇರಿದಂತೆ ಅನೇಕ ಸವಲತ್ತುಗಳನ್ನು ಕೊಡಿಸಿದೆ. ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮಾತುಕತೆ ನಡೆದಿದೆ. ಇವೆಲ್ಲದಕ್ಕೂ ಕಾರಣ ಸಂಘಟನೆ ಎಂದರು.

ಕಾರ್ಯಕ್ರಮದಲ್ಲಿ ಬೋಧಕೇತರ ನೌಕರರ ಸಂಘದ ರಾಜ್ಯಾಧ್ಯಕ್ಷ ನವೀನ್, ಉಪಾಧ್ಯಕ್ಷ ದೇವರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ, ಡಿಡಿಪಿಐ ಮಂಜುನಾಥ್, ಬಿಇಓ ರಮೇಶ್ ಇತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular