HomeKarnatakaಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿಸಿದ ಕೋಗಿಲು ಲೇಔಟ್ ಮನೆ ತೆರವು ಪ್ರಕರಣ

ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿಸಿದ ಕೋಗಿಲು ಲೇಔಟ್ ಮನೆ ತೆರವು ಪ್ರಕರಣ

ಬೆಂಗಳೂರು: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.

ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನ ಕೇರಳ ಸಿಎಂ ಪಿಣರಾಯಿ ಖಂಡಿಸಿದ್ದರು. ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ಮನೆಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ಸಂಬಂಧ ಸಿಎಂ, ಡಿಸಿಎಂ ಜೊತೆ ಮಾತನಾಡಿದ್ದೇನೆ. ಸಹಾನುಭೂತಿಯಿಂದ ನಡೆದುಕೊಳ್ಳಬೇಕಿತ್ತು ಎಂದಿದ್ದಾರೆ. ಅಲ್ಲದೇ ತಾನೇ ಸ್ವತಃ ಸಂತ್ರಸ್ತರ ಜೊತೆ ವೈಯುಕ್ತಿಕವಾಗಿ ಮಾತನಾಡುತ್ತೇನೆ. ಸಂತ್ರಸ್ಥರಿಗೆ ಪುನರ್ ವಸತಿ ಕಲ್ಪಿಸಿಕೊಡುತ್ತೇವೆ ಎನ್ನುವ ಭರವಸೆಯನ್ನ ಕೆಸಿ ವೇಣುಗೋಪಾಲ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ರೀತಿ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಅಂತಹ ಕ್ರಮಗಳಿಗೆ ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿ ಅಗತ್ಯವೆಂದು ತಿಳಿಸಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭರವಸೆ ನೀಡಿರುವುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಡುವೆ ಸರ್ಕಾರದಿಂದ ಈ ಭರವಸೆ ನೀಡಲಾಗಿದೆ.

ಸರ್ಕಾರವು ದುರ್ಬಲ ಕುಟುಂಬಗಳನ್ನು ಬೇರೆ ವ್ಯವಸ್ಥೆ ಮಾಡದೆ ಸ್ಥಳಾಂತರಿಸುತ್ತಿದೆ. ನಿರಾಶ್ರಿತರಿಗೆ ತಕ್ಷಣ ಪುನರ್ವಸತಿ, ವಸತಿ ಮತ್ತು ಮೂಲಭೂತ ಅಗತ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಕೆಸಿ ವೇಣುಗೋಪಾಲ್ ಟ್ವೀಟ್

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದೆ.ಕೆಲವು ವಿಚಾರಗಳನ್ನ ಕೇಂದ್ರದಲ್ಲಿಟ್ಟುಕೊಂಡು, ಅಂತಹ ಕ್ರಮಗಳನ್ನು ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಕೈಗೊಳ್ಳಬೇಕಾಗಿತ್ತು. ಈ ಬಗ್ಗೆ ಎಐಸಿಸಿ ಕಳವಳ ವ್ಯಕ್ತಪಡಿಸುತ್ತೆದೆ.ಪೀಡಿತ ಕುಟುಂಬಗಳೊಂದಿಗೆ ವೈಯಕ್ತಿಕವಾಗಿ ತೊಡಗಿಸಿಕೊಳ್ಳುವುದಾಗಿ, ಕುಂದುಕೊರತೆಗಳನ್ನು ಪರಿಹರಿಸಲು ಸೂಕ್ತವಾದ ಕಾರ್ಯವಿಧಾನವನ್ನು ಜಾರಿಗೆ ತರುವುದಾಗಿ ಹಾಗೂ ಸಂತ್ರಸ್ತರಿಗೆ ಪುನರ್ ವಸತಿ ಮತ್ತು ಪರಿಹಾರವನ್ನು ನೀಡುವುದಾಗಿ ಕೆಸಿ ವೇಣುಗೋಪಾಲ್ ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular