ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ನಮ್ಮ ಪೊಲೀಸರಿಗೆ ಸಮಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿಯೇ ಕರ್ನಾಟಕ ಪೊಲೀಸರು ಮಾದರಿಯಾಗಿದ್ದರು. ಆದರೆ ಈಗ ನಮ್ಮ ಪೊಲೀಸರು ಪೊಲೀಸ್ ಕೆಲಸವನ್ನು ಬಿಟ್ಟು ಬೇರೆ ಕೆಲಸಗಳಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಇದಕ್ಕೆ ಉತ್ತರ ನೀಡಿ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು ಈಗ ಡ್ರಗ್ಸ್ ಸಿಟಿ ಆಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆದರೆ ಏನು ಅನುಕೂಲವಾಗುತ್ತದೆ ಎಂದು ಸಂಸದ ಸುಧಾಕರ್ ಪ್ರಶ್ನಿಸಿದ್ದಾರೆ.

