HomeLatest Newsರಾಜ್ಯದ 'ರೆಸಾರ್ಟ್, ಹೋಟೆಲ್, ಹೋಂ ಸ್ಟೇ' ಮಾಲೀಕರ ಗಮನಕ್ಕೆ : ಹೊಸ ವರ್ಷಾಚರಣೆ ವೇಳೆ ಈ...

ರಾಜ್ಯದ ‘ರೆಸಾರ್ಟ್, ಹೋಟೆಲ್, ಹೋಂ ಸ್ಟೇ’ ಮಾಲೀಕರ ಗಮನಕ್ಕೆ : ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ

ದುನಿಯಾ ಡಿಜಿಟಲ್ ಡೆಸ್ಕ್ : 2026 ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ತಿಳಿಸಿದ್ದಾರೆ.

ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು.

ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು.ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಅಳವಡಿಸುವುದು. ಸಿಸಿಟಿವಿ ಅಳವಡಿಸುವುದು, ಸಿ.ಸಿ ಟಿವಿಯ 45 ದಿನಗಳ ಫೂಟೇಜ್ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾಗೂ “ನೀವು ಸಿಸಿಟಿವಿ ಕಣ್ಗಾವಲಿನಲ್ಲಿರುತ್ತೀರಿ” ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಅಹಿತಕರ ಘಟನೆ ಅಥವಾ ತಪ್ಪುಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಸರ್ಕಾರದ ಗಮನಕ್ಕೆ ತರತಕ್ಕದ್ದು, ಇಲ್ಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮಕೈಗೊಳ್ಳುವುದು.ಯಾವುದೇ ಮಾದಕ ವಸ್ತುಗಳು ಹಾಗೂ ಮದ್ಯಪಾನ ಇತ್ಯಾದಿಗಳಿಗೆ ಅವಕಾಶ ನೀಡದಂತೆ ಕ್ರಮವಹಿಸುವುದು. ಕಡ್ಡಾಯವಾಗಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡುವುದು.ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್ಗಳಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಿದ್ದು, ಅದರಂತೆ ಸೂಕ್ತ ಕ್ರಮ ವಹಿಸುವುದು.

ದಯವಿಟ್ಟು ಯಾವುದೇ ಪ್ರವಾಸಿಗರು ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಪ್ರೋತ್ಸಾಹಿಸಬಾರದು. ತುರ್ತು ಸಮಯದಲ್ಲಿ 24*7 ಕಾರ್ಯನಿರ್ವಹಿಸುವ ದೂರವಾಣಿ ಸಂಖ್ಯೆ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ 08272-221077, 08272-221099, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ 9480804900, 08272-228330 ನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular