HomeLatest NewsSHOCKING: ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕೊಲೆಗೈದು ಚಿನ್ನಾಭರಣ ಲೂಟಿ

SHOCKING: ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕೊಲೆಗೈದು ಚಿನ್ನಾಭರಣ ಲೂಟಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಹೊರವಲಯದಲ್ಲಿ ಭಾನುವಾರ ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯನ್ನು ಕೊಲೆ ಮಾಡಿ ಚಿನ್ನದ ಸರ, ಕಿವಿಯೋಲೆ, ಮೂಗುತಿ ಲೂಟಿ ಮಾಡಲಾಗಿದೆ.

ಜಗದೀಶ್ ಅವರ ಪತ್ನಿ ಮಮತಾ(42) ಮೃತಪಟ್ಟವರು. ಮಮತಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯೋಲೆ ಮತ್ತು ಮೂಗುತಿಯನ್ನು ದುಷ್ಕರ್ಮಿಗಳು ದೋಚಿದ್ದಾರೆ. ಎರಡು ಕಿವಿಗಳು ಕಿತ್ತು ಬರುವಂತೆ ದುಷ್ಕರ್ಮಿಗಳು ಓಲೆಯನ್ನು ಕಿತ್ತುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಮತಾ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. 2 ಗಂಟೆಯಾದರೂ ಅವರು ವಾಪಸ್ ಬಾರದ ಕಾರಣ ಪತಿ ಜಗದೀಶ್ ನಾಲೆಯ ಬಳಿ ಹೋಗಿ ಹುಡುಕಿದಾಗ ಮಮತಾ ಕಾಣಿಸಿಲ್ಲ. ಬಟ್ಟೆಗಳು ಅಲ್ಲೇ ಇದ್ದಿದ್ದರಿಂದ ಗಾಬರಿಯಾದ ಅವರು ಹುಡುಕಾಟ ನಡೆಸಿದ್ದಾರೆ. ದೂರದವರೆಗೂ ನಾಲೆಯಲ್ಲಿ ಹುಡುಕಾಡಿದಾಗ ಮಮತಾ ಅವರ ಮೃತದೇಹ ಕಂಡು ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆಯಾದ ಸ್ಥಿತಿಯಲ್ಲಿ ಮಮತಾ ಶವ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯೋಲೆ, ಮೂಗುತಿ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಶ್ರೀರಂಗಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular