HomeLatest Newsಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಹೊಸ ವರ್ಷದ ಪಾರ್ಟಿ ಮಾಡುವವರ ಗಮನಕ್ಕೆ

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಹೊಸ ವರ್ಷದ ಪಾರ್ಟಿ ಮಾಡುವವರ ಗಮನಕ್ಕೆ

ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ. ಆದ್ದರಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್ಪಿ ಡಾ.ವಿಕ್ರಮ ಅಮಟೆ ಹಿರಿಯ ಅಧಿಕಾರಿಗಳು, ರೆಸಾರ್ಟ್/ ಲಾಡ್ಜ್/ ಹೋಂ ಸ್ಟೇ ಮಾಲೀಕರ ಸಭೆಯನ್ನು ಕರೆದು ಚರ್ಚೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸರು ಚಿಕ್ಕಮಗಳೂರು ಪ್ರವಾಸಿಗರು, ಹೋಂಸ್ಟೇ, ರೆಸಾರ್ಟ್ ಮತ್ತು ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಸಹ ಪೊಲೀಸರ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

  • ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸ್ವಯಂಸೇವಕರು ಅಥವಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳುವುದು.
  • ಎನ್‌ಆರ್‌ಐ/ ವಿದೇಶಿಗರು/ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ವಿಶೇಷ ಖಾಳಜಿ ವಹಿಸುವುದು.
  • ಹೊಸ ವರ್ಷಾಚರಣೆ ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ಹಾಗೂ ಸ್ವಾಗತಕಾರರ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ
  • ರೆಸಾರ್ಟ್, ಹೋಂ ಸ್ಟೇ ಗಳಲ್ಲಿ ಹೊಸ ವರ್ಷಾಚರಣೆ-2026ರ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಧ್ವನಿವರ್ಧಕದ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಕಡ್ಡಾಯವಾಗಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು.
  • ಹೋಂ ಸ್ಟೇ ರೆಸಾರ್ಟ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಯಾವುದೇ ರೇವ್ ಪಾರ್ಟಿಗಳನ್ನು ಆಯೋಜಿಸದಂತೆ, ನೈತಿಕ ಪೊಲೀಸ್‌ಗಿರಿಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳುವುದು.
  • ಹೊಸ ವರ್ಷಾಚರಣೆಯ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಿಎಲ್ -5ಲೈಸೆನ್ಸ್ ಪಡೆಯುವಾಗ ಕಡ್ಡಾಯವಾಗಿ ಪೊಲೀಸ್ ನಿರಕ್ಷೇಪಣಾ ಪತ್ರ ಪಡೆದುಕೊಳ್ಳುವುದು.
  • ಹೊಸ ವರ್ಷಾಚರಣೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳಿಂದ ಲಿಖಿತ ಅನುಮತಿಯನ್ನು ಪಡೆದುಕೊಳ್ಳುವುದು.
  • ಹೊಸ ವರ್ಷದ ಸಂದರ್ಭದಲ್ಲಿ ಹಾಗೂ ಕಾರ್ಯಕ್ರಮಗಳು ಮುಗಿದ ನಂತರ ವಾಹನ ಚಾಲಕರು ಕುಡಿದು ವಾಹನ ಚಲಾಯಿಸದಂತೆ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ನಲ್ಲಿ ಪ್ರಸಾರ ಮಾಡುವಂತೆ ಸೂಚನೆಗಳನ್ನು ನೀಡಿದ್ದು ಕುಡಿದು ವಾಹನ ಚಲಾಯಿಸುವವರ ವಿರುದ್ಧ ಡಿಡಿ ಕೇಸ್ ಹಾಗೂ ಮೋಟಾರ್ ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು.
  • ಹೊಸ ವರ್ಷಾಚರಣೆಯ ಸಮಯದಲ್ಲಿ ಹೋಟೆಲ್, ಲಾಡ್ಜ್‌, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಹೋಂಸ್ಟೇ, ರೆಸಾರ್ಟ್ ಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಅತಿಥಿಗಳೊಂದಿಗೆ ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ಸೌಜನ್ಯಯುತವಾಗಿ ಉತ್ತಮ ನಡವಳಿಕೆಯೊಂದಿಗೆ ವ್ಯವಹರಿಸುವುದು.
  • ಹೊಸ ವರ್ಷಾಚರಣೆಯನ್ನು ಅತ್ಯಂತ ಶಾಂತಿಯುತವಾಗಿ ಜವಾಬ್ದಾರಿಯುತವಾಗಿ ಯಾವುದೇ ಅಹಿತಕರ ಆಗುಹೋಗುಗಳಿಗೆ ಆಸ್ಪದ ನೀಡದಂತೆ ಆಚರಿಸಲು ಪ್ರತಿಯೊಬ್ಬರೂ ಸಹಕರಿಸುವುದು.
  • ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವವರ ಸುರಕ್ಷತೆಯ ದೃಷ್ಠಿಯಿಂದ, ಅಪಾಯವಿರುವ ಸ್ಥಳಗಳಾದ ಮೇಲಂತಸ್ತು (ಟಾಪ್ ರೂಫ್) ಗಳಲ್ಲಿ ಮತ್ತು ಎತ್ತರವಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ಸೂಕ್ತವಿರುವುದಿಲ್ಲ. ಆದ್ದರಿಂದ ಎಲ್ಲಾ ಸುರಕ್ಷತಾ ನಿಯಮಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಸುರಕ್ಷಿತವಾದ ಸ್ಥಳಗಳಲ್ಲಿಯೇ ಕಡ್ಡಾಯವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡುವುದು.
  • ರೆಸಾರ್ಟ್, ಹೋಂ ಸ್ಟೇ ಗಳಲ್ಲಿ ಹೊಸ ವರ್ಷಾಚರಣೆ-2026ರ ಸಂದರ್ಭದಲ್ಲಿ ವಾಹನಗಳ ಪಾರ್ಕಿಂಗ್‌ಗೆ ಮಾಲೀಕರೇ ವ್ಯವಸ್ಥೆ ಮಾಡುವುದು.
  •  ಸಾರ್ವಜನಿಕರ ಹಿತದೃಷ್ಠಿಯಿಂದ, ಸಂಭ್ರಮಾಚರಣೆಯನ್ನು ಕಾರ್ಯಕ್ರಮ ಆಯೋಜಿಸಿರುವ ಸ್ಥಳದ ಹೊರಗಡೆ, ರಸ್ತೆಬದಿಗಳಲ್ಲಿ ಮಾಡದೇ ನಿಗದಿಪಡಿಸಿರುವ ಸ್ಥಳದ ಒಳಗಡೆಯೇ ಮಾಡುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರ ಜವಬ್ದಾರಿ.
  • ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್ 9480805100 / 8277991000, 08262-230540/235608/ 112ಕ್ಕೆ ಕರೆ ಮಾಡುವುದು
  • ಯಾವುದೇ ವೈದ್ಯಕೀಯ ಅಥವಾ ಇನ್ನಿತರೆ ತುರ್ತು ಸಂದರ್ಭದಲ್ಲಿ ತ್ವರಿತ ಸ್ಪಂದನೆ, ಅನುಕೂಲಕ್ಕಾಗಿ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವಾ ವಾಹನಗಳಲಭ್ಯತೆ & ಸನ್ನದ್ಧ ಸ್ಥಿತಿಯಲ್ಲಿರುವ ಕುರಿತು ಖಾತ್ರಿ ಪಡಿಸಿಕೊಳ್ಳುವುದು.
  • ದಿನಾಂಕ 31.12.2025 ರ ಸಂಜೆ 6:00 ಗಂಟೆಯಿಂದ ದಿನಾಂಕ 1.1.2026ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದ್ದು ಯಾವುದೇ ವ್ಯಕ್ತಿಗಳನ್ನು ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ತೆರಳಲು ಅವಕಾಶ ಮಾಡಿಕೊಡಕೂಡದು.
  • ಹೊಸ ವರ್ಷಾಚರಣೆಯ ಸಮಯದಲ್ಲಿ ಪೂರ್ವಾನುಮತಿ ಇಲ್ಲದೆ ನಿರ್ಬಂಧಿತ ಸ್ಥಳಗಳಲ್ಲಿ ರಾತ್ರಿ ವೇಳೆಯಲ್ಲಿ ನಕ್ಷತ್ರ ವೀಕ್ಷಣೆ, ಬೈಕ್ ರೈಡಿಂಗ್ ಇತ್ಯಾದಿ ಚಟುವಟಿಕೆಗಳಿಗೆ ಆಸ್ಪದ ಅವಕಾಶ ಮಾಡಿಕೊಡುವಂತಿಲ್ಲ.
  • ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯ ಹಿತ ದೃಷ್ಟಿಯಿಂದ ಪೋಲಿಸ್ ಇಲಾಖೆ ವತಿಯಿಂದ ಕಾಲಕಾಲಕ್ಕೆ ನೀಡಲಾಗುವ ಎಲ್ಲಾ ಸಲಹೆ ಸೂಚನೆ ತಿಳುವಳಿಕೆಗಳನ್ನು ಕಡ್ಡಾಯವಾಗಿ ಪಾಲಿಸುವುದು.
  • ಹೊಸ ವರ್ಷಚರಣೆಯ ಸಂದರ್ಭದಲ್ಲಿ ಯಾವುದಾದರೂ ಅಹಿತಕರ ಘಟನೆಗಳು ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಗತಿಸಿದಲ್ಲಿ ಸಂಬಂಧಪಟ್ಟ ರೆಸಾರ್ಟ್/ ಹೋಂ ಸ್ಟೇ ಮಾಲೀಕರುಗಳೇ ನೇರ ಜವಾಬ್ದಾರಿ/ಹೊಣೆಗಾರರಾಗಿರುತ್ತಾರೆ.
For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular