HomeLatest Newsಮೈಸೂರು: ಪ್ರೀತಿ ವಿಚಾರವಾಗಿ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಪ್ರೀತಿ ವಿಚಾರವಾಗಿ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಪ್ರೀತಿ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದರು. ಯುವತಿಯ ಕುಟುಂಬದ ಜಯಕುಮಾರ್‌, ಮಂಜು ಸೇರಿದಂತೆ ಐವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನವಾಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬನ್ನೂರು ಪೊಲೀಸ್‌ ಠಾಣೆಗೆ ನಾಗೇಂದ್ರ ಪೋಷಕರು ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ನಿಮಗೆ ಯಾವುದೇ ವಿಚಾರದಲ್ಲಿ ಬೇಸರ ಹಾಗೂ ಜಿಗುಪ್ಸೆ ಕಾಡಿ ಆತ್ಮಹತ್ಯೆ ಕುರಿತ ಆಲೋಚನೆಗಳು ಬರುತ್ತಿದ್ದರೆ, ಈ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ: 9152987821

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular