ಮಂಡ್ಯ: ಜೈಲುಗಳಿಗೆ ನಿಷೇಧಿತ ವಸ್ತುಗಳು, ಮಾಧಕ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾರಾಗೃಹಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ಇದೀಗ ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೂ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಮಂಡ್ಯ ಜೈಲಿನಲ್ಲಿ ಮಾದಕ ವಸ್ತುಗಳ ಸಾಗಾಟ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅಡಿಷನಲ್ ಎಸ್ ಪಿ ತಿಮ್ಮಯ್ಯ, ಗಂಗಾಧರ ಸ್ವಾಮಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಕಾರಾಗೃಹದ ಒಳಗೆ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ.

