HomeLatest NewsBREAKING: ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆಗೆ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ...

BREAKING: ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆಗೆ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ |Namma Metro

ಬೆಂಗಳೂರು :   ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ.

ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ:

ನೇರಳೆ ಮಾರ್ಗ: ವೈಟ್‌ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45 ಗಂಟೆಗೆ ಚಲ್ಲಘಟ್ಟ ದಿಂದ ವೈಟ್‌ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ: ಬೆಳಗಿನಜಾವ 2:00ಗಂಟೆಗೆ

ಹಳದಿ ಮಾರ್ಗ: ಆ.ರ್‌ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ: ಬೆಳಗಿನಜಾವ 3:10ಗಂಟೆಗೆ ಬೊಮ್ಮಸಂದ್ರ ದಿಂದ ಆರ್‌ವಿ ರಸ್ತೆಯ ವರೆಗೆ: ಬೆಳಗಿನಜಾವ 1:30ಗಂಟೆಗೆ

ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣ: ನೇರಳೆ ಮಾರ್ಗದ ವೈಟ್‌ ಫೀಲ್ಡ್ ಮತ್ತು ಚಲ್ಲಘಟ್ಟ ಕಡೆಗೆ ಹಾಗೂ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಕಡೆಗೆ ಹೊರಡುವ ಕೊನೆಯ ರೈಲು ಬೆಳಗಿನಜಾವ 2:45ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ಯಾಣ ಮೆಜೆಸ್ಟಿಕ್ ನಿಂದ ಹೊರಡಲಿದೆ.

ರೈಲು ಸಂಚಾರದ ಅವಧಿ: 31ನೇ ಡಿಸೆಂಬರ್ 2025ರ ರಾತ್ರಿ 11:30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.

ಎಂ.ಜಿ ರಸ್ತೆ ನಿಲ್ದಾಣ ಮುಚ್ಚುವಿಕೆ: ಎಂ.ಜಿ ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿನಿರೀಕ್ಷೆಯಿರುವುದರಿಂದ, 31ನೇ ಡಿಸೆಂಬರ್ 2025ರ ರಾತ್ರಿ 10:00ರಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ, ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದ್ದು, ಪ್ರಯಾಣಿಕರು ಅಲ್ಲಿ ರೈಲನ್ನು ಹತ್ತಿ-ಇಳಿಯಬಹುದು.

ಟಿಕೆಟ್ ಸಂಬಂಧಿತ ಸೂಚನೆ: ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ, ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ 11:00ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11:00 ಗಂಟೆಯ ನಂತರ ಪುಯಾಣಿಸುವ ಪ್ರಯಾಣಿಕರು ಕ್ಯೂಆರ್ ಟಿಕೆಟ್‌ಗಳ ಮೂಲಕ, ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸುವಂತೆ ಅಥವಾ ಸಾಕಷ್ಟು ನಗದುವಿರುವ ಸ್ಮಾರ್ಟ್ ಕಾರ್ಡ್‌ಗಳನ್ನು ಬಳಸುವಂತೆ ಸಲಹೆ ನೀಡಲಾಗಿದೆ.

ಸಾರ್ವಜನಿಕರಿಗೆ ಮನವಿ: ಹೊಸ ವರ್ಷದ ಸಂಭ್ರಮದ ವೇಳೆ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಗಡವಾಗಿ ಯೋಜಿಸಿ, ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಮೆಟ್ರೋ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ನಿಗಮವು ಮನವಿ ಮಾಡುತ್ತದೆ.

ನಮ್ಮ ಮೆಟ್ರೋ ಎಲ್ಲ ನಾಗರಿಕರಿಗೆ ಸುರಕ್ಷಿತ ಹಾಗೂ ಸಂತೋಷಕರ ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತದೆ!

https://twitter.com/OfficialBMRCL/status/2005614526893523378/photo/1

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular