ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನನ್ನು ಬಾಗಲೂರು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪತ್ರಕರ್ತ ಶರತ್ ಶರ್ಮಾ ಕಲಗಾರು ಬಂಧಿತ ಆರೋಪಿ. ಬಾಗಲೂರು ಠಾಣೆ ಸಬ್ ಇನ್ಸ್ಪೆಕ್ಟರ್ ರಮೇಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿ ಶರತ್ ಶರ್ಮಾನನ್ನು ವಶಕ್ಕೆ ಪಡೆಯಲಾಗಿದೆ.
ಬಾಗಲೂರು ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಶಬರೀಶ್, ಸಬ್ ಇನ್ಸ್ಪೆಕ್ಟರ್ ರಮೇಶ್ ಮತ್ತು ಕೊತ್ತನೂರು ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಚೇತನ್ ಕುಮಾರ್, ಅವಲಹಳ್ಳಿ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ರಾಮಕೃಷ್ಣ ಅವರಿಗೆ ವಾಟ್ಸಾಪ್ ಕರೆ ಮಾಡಿದ್ದ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ ನಂತರ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ಪೆಕ್ಟರ್ ಗಳಿಗೆ ಡಿಸೆಂಬರ್ 28 ರಂದು ವಾಟ್ಸಾಪ್ ಕರೆ ಮಾಡಿದ್ದ ಶರತ್ ಶರ್ಮಾ ಡ್ರಗ್ಸ್ ದಂಧೆ ನಡೆಸಲು ಕೋಟಿ ಕೋಟಿ ಲಂಚ ಪಡೆದು ಅವಕಾಶ ನೀಡಿದ್ದೀರಿ. ಈ ವಿಚಾರ ಡಿಸೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಪ್ರಸಾರವಾಗಲಿದೆ. ಸುದ್ದಿ ಪ್ರಸಾರವಾದರೆ ನೀವು ಅಮಾನತು ಆಗುತ್ತೀರಿ. ಸುದ್ದಿ ಪ್ರಸಾರವಾಗದಿರಲು ತಲಾ ಐದು ಲಕ್ಷ ರೂಪಾಯಿ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಆಡಿಯೋ ದಾಖಲಿಸಿಕೊಂಡಿದ್ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಸಗಿ ವಾಹಿನಿ ಪರವಾಗಿ ಆರೋಪಿ ಮಧ್ಯಸ್ಥಿಕೆ ವಹಿಸಿದ್ದ ಎಂದು ಹೇಳಲಾಗಿದೆ.

