HomeLatest Newsಕಟ್ಟಡ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಗಾರ್ಮೆಂಟ್ಸ್ ನೌಕರರು, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸೈಟ್,...

ಕಟ್ಟಡ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಗಾರ್ಮೆಂಟ್ಸ್ ನೌಕರರು, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸೈಟ್, ಮನೆ ನೀಡಲು ಗೃಹ ಮಂಡಳಿ ಯೋಜನೆ

ಬೆಂಗಳೂರು: ಶ್ರಮಿಕರಿಗೆ ರಿಯಾಯಿತಿ ದರದಲ್ಲಿ ನಿವೇಶನ, ಮನೆ ನೀಡಲು ಕರ್ನಾಟಕ ಗೃಹ ಮಂಡಳಿ ಮುಂದಾಗಿದ್ದು, ರಾಜ್ಯಾದ್ಯಂತ ಒಂದು ಲಕ್ಷ ನಿವೇಶನ, 10,000 ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

‘ಸಮುದಾಯದ ಶ್ರಮಿಕರಿಗೆ ಮುಖ್ಯಮಂತ್ರಿಗಳ ನಮ್ಮ ಮನೆ ಯೋಜನೆ’ಯಡಿ ರಾಜ್ಯಾದ್ಯಂತ ಒಂದು ಲಕ್ಷ ನಿವೇಶನ 10,000 ಮನೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಗತ್ಯವಿರುವ ಜಮೀನು ಭೂಸ್ವಾಧೀನ, ಅನುಪಾತದ ಪಾಲುದಾರಿಕೆ ಮತ್ತು ಜಂಟಿ ಸಹಭಾಗಿತ್ವದಲ್ಲಿ ಪಡೆಯಲು ಕರ್ನಾಟಕ ಗೃಹ ಮಂಡಳಿ ನಿರ್ಧರಿಸಿದೆ. ಅನುದಾನವನ್ನು ಮಂಡಳಿಯ ಸ್ವಂತ ಸಂಪನ್ಮೂಲದಿಂದ ಭರಿಸಲಾಗುವುದು. ಅನುದಾನದ ಕೊರತೆ ಎದುರಾದಲ್ಲಿ ನಿಯಮಾನುಸಾರ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆಯಲು ಉದ್ದೇಶಿಸಲಾಗಿದೆ.

31 ಜಿಲ್ಲೆಗಳಲ್ಲಿ 3300 ಎಕರೆ ಜಮೀನಿನಲ್ಲಿ ಒಂದು ಲಕ್ಷ ನಿವೇಶನ ರಚಿಸಲಾಗುವುದು. ಆಟೋ ಚಾಲಕರು, ಗಾರ್ಮೆಂಟ್ಸ್, ಕೈಗಾರಿಕೆ ನೌಕರರು, ಎಲೆಕ್ಟ್ರಿಷಿಯನ್, ಕ್ಷೌರಿಕರು, ಡೆಲಿವರಿ ಏಜೆಂಟ್ ಗಳು, ಮಾರ್ಕೆಟಿಂಗ್ ಏಜೆಂಟ್ ಗಳು, ಪ್ಲಂಬರ್ಸ್, ವೆಲ್ಡರ್ಸ್, ಮರ ಕೆಲಸದವರು, ಬೀದಿ ವ್ಯಾಪಾರಿಗಳು, ಟ್ಯಾಕ್ಸಿ ಚಾಲಕರು, ಪೈಂಟರ್, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ನಿರ್ಮಾಣ ಕೆಲಸದವರು, ತರಕಾರಿ ವ್ಯಾಪಾರಿಗಳು, ಸಿನಿಮಾ ನೌಕರರು, ನಾಟಕ ಕಲಾವಿದರು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಶ್ರಮಿಕ ವರ್ಗದವರಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ನಿವೇಶನ, ಮನೆ ನೀಡುವ ಬಗ್ಗೆ ಯೋಜನೆ ರೂಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular