HomeLatest NewsBIG NEWS : ಬೆಂಗಳೂರಲ್ಲಿ ಕಿರುತೆರೆ ನಟಿ 'ನಂದಿನಿ' ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್...

BIG NEWS : ಬೆಂಗಳೂರಲ್ಲಿ ಕಿರುತೆರೆ ನಟಿ ‘ನಂದಿನಿ’ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಸರ್ಕಾರಿ ಕೆಲಸ’ ಇಷ್ಟ ಇಲ್ಲ ಎಂದು ಸೂಸೈಡ್.!

ಬೆಂಗಳೂರು : ಬೆಂಗಳೂರಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೈರಿಯೊಂದು ಪತ್ತೆಯಾಗಿದೆ.

ಕೆಂಗೇರಿ ಪೊಲೀಸರು ಡೈರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ‘ನನಗೆ ಸರ್ಕಾರಿ ಕೆಲಸ ಇಷ್ಟ ಇಲ್ಲ, ನನಗೆ ಆ್ಯಕ್ಟಿಂಗ್ ಅಂದರೆ ಇಷ್ಟ ಅದಕ್ಕೆ ಸೂಸೈಡ್ ಮಾಡಿಕೊಂಡೆ’ ಎಂದು ನಟಿ ನಂದಿನಿ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು. ಮೂಲತ: ಕೊಟ್ಟೂರಿನವರಾದ ನಂದಿನಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ, ಮದುಮಗಳು, ಸೇರಿ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ತಮಿಳು ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular