HomeIndiaBig News: ಟಾರ್ಗೆಟ್ 160, ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ, 3 ದಿನ ವಾಸ್ತವ್ಯ, ಮಹತ್ವದ...

Big News: ಟಾರ್ಗೆಟ್ 160, ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ, 3 ದಿನ ವಾಸ್ತವ್ಯ, ಮಹತ್ವದ ಸಭೆಗಳು

ಕೇಂದ್ರದ ಗೃಹ ಸಚಿವ, ಬಿಜೆಪಿಯ ಚುನಾವಣಾ ಚಾಣಾಕ್ಯ ಅಮಿತ್ ಶಾ ಸೋಮವಾರ ರಾತ್ರಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಕಾಲ ಅವರು ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದು, 2026ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.

ಕೋಲ್ಕತ್ತಾದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಅಮಿತ್ ಶಾ ಅವರಿಗೆ ಭವ್ಯ ಸ್ವಾಗತ ಕೋರಿದರು. ಸಾಮಾಜಿಜ ಜಾಲತಾಣದಲ್ಲಿ ಅಮಿತ್ ಶಾ ಪೋಸ್ಟ್ ಹಾಕಿದ್ದು, ಪಶ್ಚಿಮ ಬಂಗಾಳವು ಬದಲಾವಣೆಗೆ ಸಂಪೂರ್ಣವಾಗಿ ಸಜ್ಜಾಗಿದೆ. ಮೂರು ದಿನಗಳ ಪಶ್ಚಿಮ ಬಂಗಾಳ ಪ್ರವಾಸಕ್ಕಾಗಿ ಕೋಲ್ಕತ್ತಾಗೆ ತಲುಪಿದ್ದೇನೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಗರು ತೋರಿದ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಭಾವುಕನಾಗಿದ್ದೇನೆ. ನಾಳೆ ಪಶ್ಚಿಮ ಬಂಗಾಳ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ದಿನ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಲಿದ್ದೇನೆ ಹಾಗೂ ಕೋಲ್ಕತ್ತಾ ಮಹಾನಗರದ ಉತ್ಸಾಹಿ ಮತ್ತು ಬಲಿಷ್ಠ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ಅಮಿತ್ ಶಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2026ರ ಮೊದಲ ಚುನಾವಣೆ: 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ 2026ರಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ವರ್ಷ 5 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ಈಗಾಗಲೇ ಚುನಾವಣಾ ತಯಾರಿಯನ್ನು ಆರಂಭಿಸಿದೆ.

2026 ಮಾರ್ಚ್/ ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದ್ದು, ಟಿಎಂಸಿ ನಾಯಕಿ, ಹಾಲಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಡುವಿನ ಜಿದ್ದಾಜಿದ್ದಿಗೆ ಪಶ್ಚಿಮ ಬಂಗಾಳ ಸಾಕ್ಷಿಯಾಗಲಿದೆ.

160 ಕ್ಷೇತ್ರಗಳಲ್ಲಿ ಗೆಲುವು ಎಂಬ ಗುರಿಯನ್ನು ಹಾಕಿಕೊಂಡು ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಿದ್ಧತೆಯನ್ನು ಆರಂಭಿಸಿದೆ. ಬಿಜೆಪಿಯ ನೇರ ಎದುರಾಳಿ ಟಿಎಂಸಿ ಪಕ್ಷ. ಈಗಾಗಲೇ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಮೂಲಕ ಕೇಂದ್ರ ಸರ್ಕಾರ ಮಮತಾ ಬ್ಯಾನರ್ಜಿ ಕೆಂಗಣ್ಣಿಗೆ ಗುರಿಯಾಗಿದೆ.

ತೃಣಮೂಲ ಕಾಂಗ್ರೆಸ್‌ನಿಂದ ಭಾರೀ ವಿರೋಧವನ್ನು ಎದುರಿಸುತ್ತಿರುವ ಬಿಜೆಪಿ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲಲಿದೆ? ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಪಶ್ಚಿಮ ಬಂಗಾಳದ ಚುನಾವಣೆ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ.

160 ಕ್ಷೇತ್ರಗಳ ಗೆಲುವು ಗುರಿಯೊಂದಿಗೆ ಬಿಜೆಪಿ ತಳಮಟ್ಟದ ಸಂಘಟನೆ, ಸಣ್ಣ ಗುಂಪು ಸಭೆಗಳ ಸಭೆ ಮುಂತಾದ ಕಾರ್ಯತಂತ್ರ ರೂಪಿಸಿದೆ. ಮೂರು ದಿನಗಳ ಪ್ರವಾಸದ ಸಂದರ್ಭದಲ್ಲಿ ಪಕ್ಷದ ಚುನಾವಣಾ ತಯಾರಿಯ ಕುರಿತು ಅಮಿತ್ ಶಾ ಮಾಹಿತಿ ಪಡೆಯಲಿದ್ದು, ನಿರ್ದೇಶನಗಳನ್ನು ರಾಜ್ಯ ನಾಯಕರಿಗೆ ನೀಡಲಿದ್ದಾರೆ.

2019, 2021ರ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣಾ ಫಲಿತಾಂಶದ ಆಧಾರದ ಮೇಲೆ ರಾಜ್ಯದ ವಿಧಾನಸಭಾ ಕ್ಷೇತ್ರಗಳತ್ತ ಗಮನಹರಿಸಲಾಗಿದೆ. ಅಮಿತ್ ಶಾ ಈಗಾಗಲೇ ತಮ್ಮ ತಂಡದ ಮೂಲಕ ರಾಜ್ಯದಲ್ಲಿ ಗೆಲ್ಲುವುದು ಕಷ್ಟವಾಗಿರುವ ಕ್ಷೇತ್ರಗಳ ವರದಿಯನ್ನು ತರಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ವಿಧಾನಸಭೆ ಬಲ 294. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 148. 2021ರ ಚುನಾವಣೆಯಲ್ಲಿ ಬಿಜೆಪಿ 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು ಮತ್ತು 60 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿತ್ತು. ಆದ್ದರಿಂದ ಈ ಬಾರಿ ಅಧಿಕಾರವನ್ನು ಹಿಡಿದು ಟಿಎಂಸಿಗೆ ತಿರುಗೇಟು ನೀಡಬೇಕು ಎಂದು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular