ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ಬಿಲ್ ಪ್ರತಿ ಯೂನಿಟ್ ಗೆ 10 ಪೈಸೆವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಗ್ರಾಹಕರಿಗೆ ಶಾಕ್ ನೀಡಿದ್ದು, ಗ್ರಾಹಕರು ಬಳಸುವ ವಿದ್ಯುತ್ ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದು ಹೇಳಿದೆ. ಇದನ್ನು ಟಾಪ್ ಅಪ್ ಅಥವಾ ಟ್ರೂ ಅಪ್ ಎಂದು ಕರೆದಿದೆ. ಆದರೆ ವಿದ್ಯುತ್ ದರ ಪರಿಷ್ಕರಣೆ ಎಂದು ಕರೆದಿಲ್ಲ.
ಹೊಸ ಮಾದರಿಯಲ್ಲಿ ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ನಡೆಯಲಿದೆ. ಟಾಪ್ ಅಪ್ ಎಲ್ಲಾ ಎಸ್ಕಾಂಗಳಿಗೆ ಸಮಾನವಾಗಿ ಅನ್ವಯವಾಗಲಿದೆ. ಪ್ರತಿ ಯೂನಿಟ್ ಗೆ ಗರಿಷ್ಟ 8-10 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಗೃಹಜ್ಯೋತಿ ಯೋಜನೆಯ ನಿಯಮಗಳ ಅನ್ವಯ ಗ್ರಾಹಕರ ಬಿಲ್ನಲ್ಲಿ ಬದಲಾವಣೆಗಳಾಗುತ್ತಿವೆ, ಕೆಲವು ವರ್ಗದವರಿಗೆ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ.

