ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಡಿಸೆಂಬರ್ 26 ರಿಂದ 28 ರ ವರೆಗೆ ನವದೆಹಲಿಯಲ್ಲಿ ನಡೆದ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ಸಮ್ಮೇಳನವು ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ರಚನಾತ್ಮಕ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ–ರಾಜ್ಯ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿತ್ತು.

