HomeLatest NewsBREAKING: ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯಲು ಗ್ರಾಮಸ್ಥರ ವಿರೋಧ

BREAKING: ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯಲು ಗ್ರಾಮಸ್ಥರ ವಿರೋಧ

ಮಂಡ್ಯ: ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯಲು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ತೋಪಿನ ತಿಮ್ಮಪ್ಪನ ಸನ್ನಿಧಿಯಲ್ಲಿ ವಾಗ್ವಾದ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅಭಲವಾಡಿ ಗ್ರಾಮದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದು ಅಧಿಕಾರಿಗಳು ಸ್ಥಳದಿಂದ ತೆರಳಿದ್ದಾರೆ.

ಇದುವರೆಗೆ ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್ ನಿಂದ ದೇವಾಲಯ ನಿರ್ವಹಣೆ ಮಾಡಲಾಗುತ್ತಿತ್ತು. ಚಿಕ್ಕದಾಗಿದ್ದ ದೇವಸ್ಥಾನವನ್ನು ಟ್ರಸ್ಟ್ ಜೀರ್ಣೋದ್ಧಾರ ಮಾಡಿತ್ತು. ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ದೇವಸ್ಥಾನ ಸುಪರ್ದಿಗೆ ಪಡೆಯಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪರ್ದಿಗೆ ತೆಗೆದುಕೊಳ್ಳುವಂತೆ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸರ್ಕಾರ ಸುಪರ್ದಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ತಹಶೀಲ್ದಾರ್ ಪರಶುರಾಮ್ ನೇತೃತ್ವದಲ್ಲಿ ಸುಪರ್ದಿಗೆ ಪಡೆಯಲು ಯತ್ನಿಸಲಾಗಿದೆ. ಅಧಿಕಾರಿಗಳನ್ನು ತಡೆದ ಅಗಲವಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಹೆಚ್ಚಾದ ನಂತರ ಎರಡು ದಿನ ಕಾಲಾವಕಾಶ ನೀಡಿದ ಅಧಿಕಾರಿಗಳು ಸ್ಥಳದಿಂದ ತೆರಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular