ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಯಂಡಹಳ್ಳಿಯ ಐಟಿಐ ಲೇಔಟ್ ನಲ್ಲಿ ಸೋಫಾ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ ತೆಗುಲಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ್ದು, ಸೋಫಾ, ತಯಾರಿಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಹರಸಾಹಸ ನಡೆಸಿ ಬೆಂಕಿ ನಂದಿಸಿದ್ದಾರೆ. ಸುಮಾರು 3 ಕೋಟಿ ರೂ.ಗೂ ಅಧಿಕ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

