HomeLatest Newsಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ವಲಸಿಗರಿಗೆ ಮನೆ ಹಂಚಿಕೆ ಮಾಡಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ವಲಸಿಗರಿಗೆ ಮನೆ ಹಂಚಿಕೆ ಮಾಡಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ಬಡ ವಲಸೆ ಕಾರ್ಮಿಕರಿಗೆ ಮನೆಗಳನ್ನು ಹಂಚಿಕೆ ಮಾಡುವಂತೆ ವಿಧಾನಪರಿಷತ್ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಕುರಿತಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಸತಿ ಸಚಿವ ಜಮೀರ್ ಅಹ್ಮದ್, ಬಿಡಿಎ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ಕಳೆದ ಎರಡು ಮೂರು ದಶಕಗಳಿಂದ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಉತ್ತರ ಕರ್ನಾಟಕದ ಜನ ವಲಸೆ ಬಂದಿದ್ದಾರೆ. ಕಡು ಬಡವರಾಗಿದ್ದು, ಅಸಂಘಟಿತ ವಲಯದಲ್ಲಿ ದುಡಿಯುವ ಅವರು ನಗರದ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿಗೂ ಶೆಡ್ ಗಳು, ಕೊಳಗೇರಿಗಳು ಇಲ್ಲವೇ ಸಣ್ಣ ಬಾಡಿಗೆ ಕೊಠಡಿಗಳಲ್ಲಿ ಅಸಹನೀಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. 2011ರ ಜನಗಣತಿಯ ಪ್ರಕಾರ 9.33 ಲಕ್ಷ ಮಂದಿ ರಾಜ್ಯದ ಇತರೆ ಜಿಲ್ಲೆಗಳಿಂದ ಬೆಂಗಳೂರಿಗೆ ವಲಸೆ ಬಂದಿದ್ದರು ಎನ್ನುವ ಮಾಹಿತಿ ಇದೆ. ಬೆಂಗಳೂರನ್ನು ಕಟ್ಟಿದ ಈ ಕೈಗಳಿಗೆ ಒಂದು ಸುಭದ್ರ ಸೂರು ಕಲ್ಪಿಸುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ಬಡ ವಲಸೆ ಕಾರ್ಮಿಕರಿಗೆ ವಾಸ ಯೋಗ್ಯ ಮನೆ ಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular