HomeLatest Newsಹೊಸ ವರ್ಷಾಚರಣೆ: ಕೊಡಗು ಪ್ರವಾಸಿಗರಿಗೆ ಅಲರ್ಟ್‌ ಕೊಟ್ಟ ಪೊಲೀಸ್

ಹೊಸ ವರ್ಷಾಚರಣೆ: ಕೊಡಗು ಪ್ರವಾಸಿಗರಿಗೆ ಅಲರ್ಟ್‌ ಕೊಟ್ಟ ಪೊಲೀಸ್

ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣ ಕೊಡಗು 2026ರ ಹೊಸ ವರ್ಷಾಚರಣೆಗೆ ಸಿದ್ದವಾಗಿದೆ. ಸಾವಿರಾರು ಪ್ರವಾಸಿಗರು ಹೊಸ ವರ್ಷವನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆಗೆ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ ರೆಸಾರ್ಟ್/ ಲಾಡ್ಜ್‌ಗಳಲ್ಲಿ ವಾಸ್ತವ್ಯ ಹೂಡುತ್ತಾರೆ.

ಪ್ರವಾಸಿಗರು ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿ ಸಂಖ್ಯೆ 08272- 228300, 9480804900ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಜಿಲ್ಲಾದ್ಯಂತ ಸಂಭ್ರಮಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಸಂಭ್ರಮಾಚರಣೆಯ ಸಮಯದಲ್ಲಿ ವಿದೇಶಿಯರೂ ಸೇರಿದಂತೆ ಜಿಲ್ಲೆಯ, ರಾಜ್ಯದ ಹಾಗೂ ಹೊರರಾಜ್ಯಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಆದುದರಿಂದ ಹೊಸ ವರ್ಷಾಚರಣೆ ವೇಳೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ದಿನಾಂಕ 31-12-2025 ಹಾಗೂ ದಿನಾಂಕ 01-01-2026 ರಂದು ಹಗಲು ಮತ್ತು ರಾತ್ರಿ ತಪ್ಪದೆ ಗಸ್ತು ಕರ್ತವ್ಯಕ್ಕೆ ಹಾಗೂ ಚರ್ಚ್‌ಗಳಲ್ಲಿ ಪ್ರಾರ್ಥನೆ ನಡೆಯುವ ಸಂದರ್ಭದಲ್ಲಿ ಅಗತ್ಯ ಸಿಬ್ಬಂದಿಯವರನ್ನು ನೇಮಿಸಲಾಗಿರುತ್ತದೆ.

* ಠಾಣಾ ಸರಹದ್ದಿನಲ್ಲಿರುವ ಎಲ್ಲಾ ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳನ್ನು ಮುಂಚಿತವಾಗಿ ಪರಿಶೀಲನೆ ನಡೆಸಿ ಸಮರ್ಪಕ ರಿಜಿಸ್ಟರ್ ನಿರ್ವಹಿಸುವ ಕುರಿತು ಹಾಗೂ ರಿಜಿಸ್ಟರ್ ನಿರ್ವಹಿಸದೇ ಇದ್ದಲ್ಲಿ ಕಡ್ಡಾಯವಾಗಿ ನಿರ್ವಹಣೆ ಮಾಡುವಂತೆ ಸೂಕ್ತ ತಿಳುವಳಿಕೆ ನೀಡಲಾಗಿದೆ. ಅಲ್ಲದೆ ಸದರಿ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿಗಳು ಸುಸ್ಥಿತಿಯಲ್ಲಿರುವ ಬಗ್ಗೆ ಸೂಚನೆಗಳನ್ನು ನೀಡಲಾಗಿರುತ್ತದೆ.

* ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇ ಗಳಿಗೆ ಆಗಮಿಸುವ ಪ್ರವಾಸಿಗರ ಪೂರ್ಣ ಮಾಹಿತಿಯನ್ನು ರಿಜಿಸ್ಟರ್‌ನಲ್ಲಿ ನಮೂದಿಸುವಂತೆ ಹಾಗೂ ಭಾವಚಿತ್ರವಿರುವ ಯಾವುದಾದರೊಂದು ಮಾನ್ಯತೆ ಪಡೆದ ದಾಖಲಾತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ತಿಳುವಳಿಕೆ ನೀಡಲಾಗಿರುತ್ತದೆ.

* ಮದ್ಯದಂಗಡಿಗಳನ್ನು ನಿಗದಿತ ಸಮಯದಲ್ಲಿ ತೆರೆಯುವಂತೆ ಹಾಗೂ ಮುಚ್ಚುವಂತೆ ಸಂಬಂಧಪಟ್ಟ ಮಾಲೀಕರು/ ವ್ಯವಸ್ಥಾಪಕರು/ ಮಾರಾಟಗಾರರಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವುದು.

* ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳಲ್ಲಿ ನಡೆಸುವ ಮನೋರಂಜನಾ ಕಾರ್ಯಕ್ರಮಗಳನ್ನು ನಿಗದಿತ ಸಮಯದೊಳಗೆ ಮುಕ್ತಾಯಗೊಳಸುವಂತೆ ಮಾಲೀಕರಿಗೆ ಸೂಕ್ತ ತಿಳುವಳಿಕೆ ನೀಡಲಾಗಿರುತ್ತದೆ.

* ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳಲ್ಲಿ ಹೊಸ ವರ್ಷಾಚರಣೆಯ ನೆಪದಲ್ಲಿ ಯಾವುದೇ ರೀತಿಯ ನಿಷೇದಿತ ಮಾದಕ ವಸ್ತುಗಳನ್ನು ಬಳಸುವ ಬಗ್ಗೆ ಮುಂಚಿತವಾಗಿ ಮಾಹಿತಿ ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದು.

* ಮಾದಕ ವಸ್ತುಗಳ ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಬಂದಲ್ಲಿ ಸಂಬಂದಪಟ್ಟ ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳ ಮಾಲೀಕರು/ ವ್ಯವಸ್ಥಾಪಕರ/ ಆಯೋಜಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

* ಯಾವುದೇ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆದುಕೊಳ್ಳುವಂತೆ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳನ್ನು ಹಾಗೂ ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.

* ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಿಡಿ ಮದ್ದುಗಳನ್ನು ಸಿಡಿಸದಂತೆ ಆಯಕಟ್ಟಿನ ಸ್ಥಳಗಳಲ್ಲಿ ಅಧಿಕಾರಿ/ ಸಿಬ್ಬಂದಿಯವರನ್ನು ನೇಮಿಸಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿರುತ್ತದೆ.

* ಹೊಸ ವರ್ಷಾಚರಣೆಯ ವೇಳೆಯಲ್ಲಿ ನಡೆಸುವ ಕಾರ್ಯಕ್ರಮಗಳಿಂದ ನೆರೆಹೊರೆಯವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವುದು.

* ಠಾಣಾ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶ, ನದಿ ತೀರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಸಮಾರಂಭಗಳನ್ನು, ಡಿ.ಜೆ ಬಳಸುವುದನ್ನು ಅಥವಾ ಪಾರ್ಟಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ.

* ಜಿಲ್ಲೆಯಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಚೆಕ್‌ ಪೋಸ್ಟ್‌ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ/ ಸಿಬ್ಬಂದಿಯವರನ್ನು ನೇಮಿಸಿ ಯಾವುದೇ ರೀತಿಯ ಕಾನೂನು ಬಾಹಿರ/ ನಿಷೇಧಿತ ವಸ್ತುಗಳ ಸಾಗಾಟವಾಗದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹೊಸದಾಗಿ ಚೆಕ್‌ ಪೋಸ್ಟ್‌ಗಳನ್ನು ತೆರೆದು ತಪಾಸಣಾ ಕಾರ್ಯವನ್ನು ಕೈಗೊಳ್ಳಲಾಗುವುದು.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular