HomeLatest Newsಗಮನಿಸಿ : 'ಗ್ರಾಮ ಒನ್ ಕೇಂದ್ರ'ಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 15 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್ ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ, ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ದೇವರಪುರ ಮತ್ತು ಟಿ.ಶೆಟ್ಟಿಗೇರಿ, ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಕುಂದಚೇರಿ, ಹಾಕತ್ತೂರು ಮತ್ತು ಚೆಂಬು, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಚೆಂಬೆಬೆಳ್ಳೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಜನವರಿ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ [email protected] ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಮೂಲಕ ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿ ಪ್ರಕಟ

ಮಡಿಕೇರಿ ಡಿ.29(ಕರ್ನಾಟಕ ವಾರ್ತೆ):-ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 310 ರನ್ವಯ ಹಾಗೂ ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪಂರಾ:148:ಜಿಪಸ:2021. ದಿನಾಂಕ:15-12-2025. ರ ರೀತ್ಯಾ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಜಿಲ್ಲಾ ಯೋಜನಾ ಸಮಿತಿಯ ಸದಸ್ಯರ ಚುನಾವಣೆ (ತಿದ್ದುಪಡಿ) ನಿಯಮಗಳು 2016 ರ ಅನುಸಾರವಾಗಿ ನನಗೆ ಪ್ರದತ್ತವಾಗಿರುವ ಅಧಿಕಾರದ ಮೇರೆಗೆ ಆನಂದ ಪ್ರಕಾಶ್ ಮೀನಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್ ಆದ ನಾನು ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತ ಸದಸ್ಯರ ಪೈಕಿ 8 ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮನಿರ್ದೇಶನ ಪತ್ರವನ್ನು ನಿಗದಿತ ನಮೂನೆ-1 ರಲ್ಲಿ ಚುನಾವಣಾಧಿಕಾರಿಗಳಾದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್‍ರವರಿಗೆ ಸಲ್ಲಿಸಬಹುದಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಹಕರಿಸಲು ಸಹಾಯಕ ಚುನಾವಣಾಧಿಕಾರಿಯಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ ಅವರನ್ನು ನೇಮಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪೈಕಿ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಸದಸ್ಯರ ಸಂಖ್ಯೆ 08, ಜನವರಿ, 02 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸುವುದು.

ಜನವರಿ, 02 ರಂದು ಅಪರಾಹ್ನ 4 ಗಂಟೆಯಿಂದ 5.30 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆದುಕೊಳ್ಳಲು ಜನವರಿ, 03 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕೊನೆಯ ದಿನವಾಗಿದೆ.

ಮತದಾನ ಅವಶ್ಯವಿದ್ದರೆ ಜನವರಿ, 05 ರಂದು ಬೆಳಗ್ಗೆ 11 ಗಂಟೆಯಿಂದ 1.30 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಜನವರಿ, 05 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.(ಸೂಚನೆ ಸಮಾನ ಮತಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ). ಜನವರಿ, 05 ರಂದು ಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಕೊಡಗು ಜಿಲ್ಲಾ ಯೋಜನಾ ಸಮಿತಿ ಚುನಾವಣಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular