HomeKarnatakaGood News: ವಂದೇ ಭಾರತ್ ರೈಲು, ಮಂಗಳೂರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ

Good News: ವಂದೇ ಭಾರತ್ ರೈಲು, ಮಂಗಳೂರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ

ಭಾರತೀಯ ರೈಲ್ವೆ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಇದರಿಂದಾಗಿ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗದ ಸಂಪರ್ಕ ಇನ್ನಷ್ಟು ಸುಲಭವಾಗಲಿದೆ. ಕರಾವಳಿಗೆ ವಂದೇ ಭಾರತ್ ರೈಲು ಓಡಿಸಲು ಸಹ ಅನುಕೂಲವಾಗಲಿದೆ.

ಈ ಕುರಿತು ಮಾತನಾಡಿದ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, “ಈಗ ನಾವು ಈ ಮಾರ್ಗದ ಮೂಲಕ ಮಂಗಳೂರಿಗೆ ವಂದೇ ಭಾರತ್ ರೈಲನ್ನು ಓಡಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

55 ಕಿ.ಮೀ. ಉದ್ದದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಳಿಸುವ ಮೂಲಕ ಭಾರತೀಯ ರೈಲ್ವೆಯು ತನ್ನ ಜಾಲದ ಅತ್ಯಂತ ಕಠಿಣ ಮತ್ತು ತಾಂತ್ರಿಕವಾಗಿ ಸವಾಲಿನ ಭೂಪ್ರದೇಶಗಳಲ್ಲಿ ಕಾಮಗಾರಿಯನ್ನು ಯಶಸ್ವಿಯಾಗಿ ಮುಗಿಸಿದೆ. ಇದು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾದು ಹೋಗುವ ರೈಲು ಮಾರ್ಗವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 28ರಂದು ಈ ಮಾರ್ಗದಲ್ಲಿ ಯಶಸ್ವಿಯಾಗಿ ಎಲೆಕ್ಟ್ರಿಕ್ ಲೋಕೋಮೋಟಿವ್ ಪರೀಕ್ಷಾರ್ಥ ಸಂಚಾರವನ್ನು ಮಾಡಲಾಗಿದೆ. ಈಗ ವಿಭಾಗವು ವಿದ್ಯುತ್ ರೈಲು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದೆ. ಈ ಘಾಟ್ ಪ್ರದೇಶದ ವಿದ್ಯುದ್ದೀಕರಣದೊಂದಿಗೆ, ಇಡೀ ಬೆಂಗಳೂರು-ಮಂಗಳೂರು ರೈಲು ಮಾರ್ಗವು ಈಗ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಂತಾಗಿದೆ.

ಈ  ಭಾಗದ ರೈಲು ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಸುಸ್ಥಿರತೆಯನ್ನು ಸುಧಾರಿಸುತ್ತದೆ. ಈ ಯೋಜನೆಯು ವಂದೇ ಭಾರತ್ ಮತ್ತು ಇತರ ವೇಗದ ವಿದ್ಯುತ್ ರೈಲುಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡಲಿದ್ದು, ಕರಾವಳಿ ಪ್ರದೇಶಕ್ಕೆ ವೇಗವಾಗಿ ಪ್ರಯಾಣವನ್ನು ಮಾಡಲು ಸಹಾಯಕವಾಗಿದೆ.

ತಾಂತ್ರಿಕ ಸವಾಲುಗಳು:  ವಿದ್ಯುದೀಕರಣ ಕಾಮಗಾರಿ ಬಾಕಿ ಇದ್ದ ಕಾರಣ ವಂದೇ ಭಾರತ್ ರೈಲು ಓಡಿಸಲು ಅಡ್ಡಿ ಇತ್ತು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವೆ 55 ಕಿ.ಮೀ ಭೂಪ್ರದೇಶವು ಅತ್ಯಂತ ಸಂಕೀರ್ಣವಾಗಿದ್ದು, ರೈಲ್ವೆ ಹಳಿ ತಲುಪಲು ಯಾವುದೇ ರಸ್ತೆ ಸಂಪರ್ಕವಿಲ್ಲ. ಕಡಿದಾದ ಇಳಿಜಾರು, 57 ಸುರಂಗಗಳು, 226 ಸೇತುವೆಗಳು ಮತ್ತು 108 ತೀಕ್ಷ್ಣ ತಿರುವುಗಳನ್ನು ಇದು ಹೊಂದಿದೆ.

ಈ ಪ್ರದೇಶವು ವಿಶೇಷವಾಗಿ ಮುಂಗಾರಿನ ಸಮಯದಲ್ಲಿ ಭೂಕುಸಿತಕ್ಕೆ ಹೆಚ್ಚು ಒಳಗಾಗುತ್ತದೆ. ಆದ್ದರಿಂದ, ಈ ಭಾಗದಲ್ಲಿ ವಿದ್ಯುದೀಕರಣ ಒಂದು ದೊಡ್ಡ ಎಂಜಿನಿಯರಿಂಗ್ ಸವಾಲಾಗಿತ್ತು.ಡಿಸೆಂಬರ್ 2023ರಲ್ಲಿ ಆರಂಭಿಸಿದ್ದ ಕಾಮಗಾರಿಯನ್ನು 2025ರ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲಾಗಿದೆ.

5 ಸ್ವಿಚ್ಚಿಂಗ್ ಸ್ಟೇಷನ್‌ಗಳ ನಿರ್ಮಾಣ ಮತ್ತು ಸಂಪೂರ್ಣ ಓವರ್‌ಹೆಡ್ ವಿದ್ಯುದ್ದೀಕರಣವನ್ನು ಈ ಕಾಮಗಾರಿ ಒಳಗೊಂಡಿದೆ.ಸುರಂಗ ಮಾರ್ಗದಲ್ಲಿ ವಿಶೇಷ ಗಮನ ನೀಡಲಾಗಿದೆ. 57 ಸುರಂಗಗಳಲ್ಲಿ 427 ಮುಖ್ಯ ಬ್ರಾಕೆಟ್‌ಗಳು ಮತ್ತು 427 ಬಿಡಿ ಬ್ರಾಕೆಟ್‌ಗಳನ್ನು ಅಳವಡಿಸಲಾಗಿದೆ.

ಈ ಕಾಮಗಾರಿ ಪೂರ್ಣಗೊಂಡ ಕಾರಣ ರೈಲ್ವೆ ಇಂಧನ ಬಳಕೆ ಕಡಿಮೆಯಾಗಲಿದ್ದು, ಈ ಪ್ರದೇಶದಲ್ಲಿ ವಂದೇ ಭಾರತ್ ಸೇರಿದಂತೆ ಆಧುನಿಕ ಎಲೆಕ್ಟ್ರಿಕ್ ಸೂಪರ್‌ಫಾಸ್ಟ್ ರೈಲು ಸೇವೆಗಳ ಪರಿಚಯಕ್ಕೆ ಅನುಕೂಲವಾಗಲಿದೆ. ಈ ಮಾರ್ಗ ಐಟಿ ರಾಜಧಾನಿ ಬೆಂಗಳೂರು ಮತ್ತು ಬಂದರು ನಗರಿ ಮಂಗಳೂರು ಹಾಗೂ ಇತರ ಕರಾವಳಿ ವಾಣಿಜ್ಯ ಕೇಂದ್ರಗಳ ನಡುವಿನ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಬಲಪಡಿಸುತ್ತದೆ.

ಮಂಗಳೂರಿಗೆ ಈಗಾಗಲೇ ಎರಡು ವಂದೇ ಭಾರತ್ ರೈಲುಗಳ ಸಂಚಾರವಿದೆ. ಆದರೆ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರವಿಲ್ಲ. ಬೆಂಗಳೂರು-ಮಡಗಾಂವ್ ವಯಾ ಮಂಗಳೂರು, ಉಡುಪಿ, ಕಾರವಾರ ವಂದೇ ಭಾರತ್ ರೈಲು ಓಡಿಸಬೇಕು ಎಂಬುದು ಈಗಿನ ಬೇಡಿಕೆಯಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular