HomeLatest Newsಚಾಮರಾಜನಗರ:  ಮತ್ತೊಂದು ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಜನರು

ಚಾಮರಾಜನಗರ:  ಮತ್ತೊಂದು ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಜನರು

ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ 4 ಹುಲಿ ಮರಿಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು.

5 ಸಾಕಾನೆಗಳನ್ನು ಬಳಸಿಕೊಂಡು ಹುಲಿಯನ್ನು ಹೇಗಾದರೂ ಮಾಡಿ ಸೆರೆ ಹಿಡಿಯಬೇಕು ಎಂದು ಪಣ ತೊಟ್ಟಿದ್ದರು. ಚಾಮರಾಜನಗರ ತಾಲ್ಲೂಕಿನ ನಂಜೇದೇವನಪುರ, ಉಡಿಗಾಲ, ವೀರನಪುರ, ಕೆ.ಕೆ.ಹುಂಡಿ ಸೇರಿದಂತೆ ಏಳು ಗ್ರಾಮಗಳಲ್ಲಿ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.

ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿ ಹಗಲು ರಾತ್ರಿ ಎನ್ನದೇ ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಪಣ ತೊಟ್ಟಿದ್ದರು.  ಈಗ ಚಾಮರಾಜನಗರ ತಾಲ್ಲೂಕಿನ ವೀರನಪುರ ಗ್ರಾಮದ ಜಮೀನಿನೊಂದರಲ್ಲಿ ಹುಲಿಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಈ ಹುಲಿಯು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ತಾಯಿ ಹಾಗೂ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮತ್ತೆ ಕಾರ್ಯಾಚರಣೆ ಕೈಗೊಳ್ಳಲಿದ್ದಾರಾ? ಎಂಬುದನ್ನು ಕಾದುನೋಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular