ಬೆಂಗಳೂರು: ನ್ಯೂ ಇಯರ್ ಪಾರ್ಟಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದವನನ್ನು ದೇವನಹಳ್ಳಿ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಏರ್ಪೋರ್ಟ್ ಬ್ಯಾಕ್ ಗೇಟ್ ಸಮೀಪ ಡ್ರಗ್ಸ್ ಮಾರಾಟ ಮಾಡುವಾಗ ದಾಳಿ ನಡೆಸಿ ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 21 ಗ್ರಾಂ ಕೊಕೇನ್ ಮತ್ತು 30 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

