ಶಿವಮೊಗ್ಗ: ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿರುವ ಪ್ರಭುಲಿಂಗ ಕವಲಿಕಟ್ಟಿ, ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೂಲತಃ ಧಾರವಾಡ ಜಿಲ್ಲೆಯವರಾದ ಪ್ರಭುಲಿಂಗ ಕವಲಿಕಟ್ಟಿ, ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿ, ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ವರ್ಗಾವಣೆಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಜ. 1 ರಂದು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗುರುದತ್ ಹೆಗಡೆ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

