HomeLatest NewsBREAKING: 2025ಕ್ಕೆ ವಿದಾಯ, 2026 ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ: ಎಲ್ಲೆಡೆ ಸಂಭ್ರಮಾಚರಣೆ

BREAKING: 2025ಕ್ಕೆ ವಿದಾಯ, 2026 ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ: ಎಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: 2025ಕ್ಕೆ ವಿದಾಯ ಹೇಳಲಾಗಿದ್ದು. 2026 ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಸಂಭ್ರಮ, ಸಡಗರದೊಂದಿಗೆ ಕೇಕ್ ಕತ್ತರಿಸಿ ಪಟಾಕಿ ಸೇರಿಸಿ ಪಾರ್ಟಿ ಮಾಡುವ ಮೂಲಕ ಜನ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ವರ್ಷಾಚರಣೆಯ ಪ್ರಮುಖ ಕೇಂದ್ರಗಳಾದ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್. ಕೋರಮಂಗಲ ಮೊದಲಾದ ಕಡೆ ಮಧ್ಯರಾತ್ರಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದ್ದ ರಸ್ತೆಗಳಲ್ಲಿ ಸೇರಿದ್ದ ಲಕ್ಷಾಂತರ ಜನ ರಾತ್ರಿ ಹನ್ನೆರಡು ಗಂಟೆಯಾಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ್ದಾರೆ. ಬುಧವಾರ ಸಂಜೆಯಿಂದಲೇ ಪಾರ್ಟಿಗಳು ಆರಂಭವಾಗಿದ್ದು, ಯುವ ಜನರು ಕುಣಿದು ಕುಪ್ಪಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್, ರೆಸಾರ್ಟ್, ಡಿಜೆ ಸಂಗೀತ, ಫ್ಯಾಷನ್ ಶೋ, ಬೆಲ್ಲಿ ಡ್ಯಾನ್ಸ್, ಫೈರ್ ಕ್ಯಾಂಪ್ ಹೊಸ ವರ್ಷದ ಆಕರ್ಷಣೆಯಾಗಿದ್ದವು. ಹಲವು ಕಡೆಗಳಲ್ಲಿ ಪಟಾಕಿಯ ಚಿತ್ತಾರ ಕಣ್ಮನ ಸೆಳೆಯಿತು. ಪೊಲೀಸ್ ಬಿಗಿ ಭದ್ರತೆಯ ನಡೆಯುವೆ ಶಾಂತಿಯುತವಾಗಿ ಹೊಸ ವರ್ಷ ಆಚರಣೆ ನಡೆದಿದೆ. ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular