HomeLatest Newsರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಪಂ ವ್ಯಾಪ್ತಿಯಲ್ಲೂ ಒ.ಸಿ.ಗೆ ವಿನಾಯಿತಿ

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಪಂ ವ್ಯಾಪ್ತಿಯಲ್ಲೂ ಒ.ಸಿ.ಗೆ ವಿನಾಯಿತಿ

ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ 1200 ಚದರ ಅಡಿ ವಿಸ್ತೀರ್ಣದ ಒಳಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ(ಒ.ಸಿ.) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ನೆಲ ಪ್ಲಸ್ ಎರಡು ಅಂತಸ್ತು ಅಥವಾ ಸ್ಟಿಲ್ಟ್ ಪ್ಲಸ್ ಮೂರು ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಬುಧವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒ.ಸಿ. ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್(ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ನಿಯಂತ್ರಣ) ಮಾದರಿ ಉಪವಿಧಿಗಳು 2015ಕ್ಕೆ ತಿದ್ದುಪಡಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದಾಗಿ ಈಗಾಗಲೇ ನಿರ್ಮಾಣ ಮಾಡಲಾದ ಕಟ್ಟಡಗಳಿಗೆ, ಇನ್ನು ಮುಂದೆ ನಿರ್ಮಾಣವಾಗುವ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಪಡೆದುಕೊಳ್ಳಲು ಸುಲಭವಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular