HomeLatest NewsBREAKING: ಹೊಸ ವರ್ಷಾಚರಣೆ ವೇಳೆ ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಗಲಾಟೆ

BREAKING: ಹೊಸ ವರ್ಷಾಚರಣೆ ವೇಳೆ ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಗಲಾಟೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು, ಕೊರಳಪಟ್ಟಿ ಹಿಡಿದುಕೊಂಡು ಯುವಕರು ಹೊಡೆದಾಡಿಕೊಂಡಿದ್ದಾರೆ. ನ್ಯೂ ಇಯರ್ ಪಾರ್ಟಿ ಮೂಡಿನಲ್ಲಿ ಯುವಕರು ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಜಗಳ ಬಿಡಿಸಿ ಎಲ್ಲರನ್ನು ಸ್ಥಳದಿಂದ ಕಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಶಿವಮೊಗ್ಗ ನಗರದ ಅಡಕೆ ಮಂಡಿ ಕ್ಲಬ್ ನಲ್ಲಿ ರಾತ್ರಿ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿದೆ. ಚೇರ್ ಗಳಿಂದ ಎರಡು ಗುಂಪಿನವರು ಬಡಿದಾಡಿಕೊಂಡಿದ್ದಾರೆ. ತುಂಗಾನಗರ ಠಾಣೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಹೊಸ ವರ್ಷಾರಣೆ ಕಾರ್ಯಕ್ರಮವನ್ನು ಪೊಲೀಸರು ರದ್ದುಗೊಳಿಸಿದ್ದಾರೆ. ಘಟನೆ ಸಂಬಂಧ ಹೆಚ್ಚುವರಿ ಎಸ್ಪಿ ಮಾಹಿತಿ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular