ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಅತಿವೇಗದಲ್ಲಿ ಬೈಕ್ ಚಲಾಯಿಸಿಕೊಂಡು ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿ ನಡೆದಿದೆ.
ವೇಗವಾಗಿ ಬಂದ ರಾಯಲ್ ಎನ್ ಫೀಲ್ಡ್ ಬೈಕ್ ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ನಸುಕಿನ ಜಾವ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ವೈಯ್ಯಾಲಿಕಾವಲ್ ನಿವಾಸಿ ಶರತ್ ಮೃತ ದುರ್ದೈವಿ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

