ನವದೆಹಲಿ: ಜನವರಿ ಅಂತ್ಯದ ವೇಳೆಗೆ ಭಾರತ ಟ್ಯಾಕ್ಸಿ ಸೇವೆಯನ್ನು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಆರಂಭಿಸಲಾಗುವುದು.
ಕೇಂದ್ರ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತ್ ಟ್ಯಾಕ್ಸಿ ಆ್ಯಪ್ ಅನ್ನು ದೆಹಲಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಇದನ್ನು ಸಹಕಾರ ಟ್ಯಾಕ್ಸಿ ಕೋ ಆಪರೇಟಿವ್ ಲಿಮಿಟೆಡ್ ನಿರ್ವಹಿಸುತ್ತಿದೆ. ಇದು ವ್ಯಾಪಕ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಇದರಿಂದ ಅಧಿಕೃತ ಸೇವೆಗೆ ಈ ತಿಂಗಳ ಅಂತ್ಯದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಅಪ್ಲಿಕೇಶನ್ ನಲ್ಲಿ ಈಗಾಗಲೇ 1.4 ಲಕ್ಷಕ್ಕೂ ಹೆಚ್ಚು ಚಾಲಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

