HomeKarnatakaWeather Report: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ

Weather Report: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಎರಡು ದಿನ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರುನಲ್ಲಿ ಮೋಡ ಕವಿದ ವಾತಾವರಣ, ಚಳಿ ಮುಂದುವರೆಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲಬುರಗಿ, ಧಾರವಾಡ, ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಕೋಲಾರ, ವಿಜಯನಗರ ಜಿಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular