HomeLatest Newsಅಮೃತ್ 2.0 ಅಭಿಯಾನ : ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಅಮೃತ್ 2.0 ಅಭಿಯಾನ : ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮ ತಾಂತ್ರಿಕೇತರ ಚಟುವಟಿಕೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಅನುಮೋದಿತ 19 ಪಾರ್ಕ್ಗಳನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಸ್ವಸಹಾಯ ಸಂಘದ ಸದಸ್ಯರು ಮಹಾನಗರ ಪಾಲಿಕೆಯ ವಲಯ ಕಚೇರಿ-2 ರಲ್ಲಿನ ಡೇ-ನಲ್ಮ್ ಶಾಖೆಯಿಂದ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 14 ಸಂಜೆ 05.30 ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಮರಳಿ ಇದೇ ಶಾಖೆಗೆ ಸಲ್ಲಿಸಬೇಕು.

ಮಹಿಳಾ ಸ್ವಸಹಾಯ ಸಂಘಗಳು ಆಸಕ್ತಿಯುಳ್ಳ ಪಾರ್ಕ್ಗಳವಾರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಚನೆ:

ಪಾಲಿಕೆ ವ್ಯಾಪ್ತಿಯ 19 ಪಾರ್ಕ್ಗಳ ವಿವರಗಳನ್ನು ವಲಯ ಕಚೇರಿ-02 ರಲ್ಲಿರುವ ಡೇ-ನಲ್ಮ್ ಶಾಖೆಯಿಂದ ಖುದ್ದಾಗಿ ಅಥವಾ ಪಾಲಿಕೆಯ ವೆಬ್‌ಸೈಟ್ www.ballaricity.mrc.gov.in ನಲ್ಲಿ ಪಡೆಯಬಹುದು.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular