HomeLatest Newsಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ: ಮಾರಕಾಸ್ತ್ರದಿಂದ ತಲೆಗೆ ಹೊಡೆದು ಕೊಂದ ಯುವತಿ ಅರೆಸ್ಟ್

ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ: ಮಾರಕಾಸ್ತ್ರದಿಂದ ತಲೆಗೆ ಹೊಡೆದು ಕೊಂದ ಯುವತಿ ಅರೆಸ್ಟ್

ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಹರಿತವಾದ ಆಯುಧದಿಂದ ಕೊಂದ ಆರೋಪದ ಮೇಲೆ 18 ವರ್ಷದ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮುರ್ವಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರಿತವಾದ ಆಯುಧದಿಂದ ತಲೆಗೆ ಮಾರಕ ಗಾಯಗಳಾಗಿ ಸುಖರಾಜ್ ಪ್ರಜಾಪತಿ(50) ಅವರ ಮೃತದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್(ಎಸ್‌ಹೆಚ್‌ಒ) ರಾಜೇಂದ್ರ ಸಿಂಗ್ ರಾಜವತ್ ಹೇಳಿದ್ದಾರೆ.

ಮೃತನ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ಯುವತಿಯನ್ನು ಆಯುಧ ಸಹಿತ ಬಂಧಿಸಿದ್ದಾರೆ ಎಂದು ಎಸ್‌ಹೆಚ್‌ಒ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಯ ಸಮಯದಲ್ಲಿ, ಆ ವ್ಯಕ್ತಿ ತನ್ನ ಮನೆಗೆ ನುಗ್ಗಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾರೆ.

ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಮನೆಯಲ್ಲಿ ಇರಿಸಲಾಗಿದ್ದ ‘ಫರ್ಸಾ’ ಮಾರಕಾಸ್ತ್ರದಿಂದ ಹೊಡೆದಿದ್ದು, ಅವನ ಸಾವಿಗೆ ಕಾರಣವಾಯಿತು ಎಂದು ಹೇಳಿದ್ದಾಳೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular